ಭುವನೇಶ್ವರ್: ಬಿಜೆಪಿ ನೇತೃತ್ವದ ಎನ್‍ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಶಿವನ ದೇವಸ್ಥಾನದ ನೆಲವನ್ನು ಗುಡಿಸುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ದ್ರೌಪದಿ ಮುರ್ಮು ಅವರು ತಮ್ಮ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‍ಪುರದಲ್ಲಿರುವ ಶಿವನ ದೇವಾಲಯಕ್ಕೆ ಇಂದು ಭೇಟಿ ಕೊಟ್ಟಿದ್ದಾರೆ. ಈ ವೇಳೆ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಮೊದಲು ದೇವಾಲಯದ ನೆಲವನ್ನು ಗುಡಿಸಿದ್ದಾರೆ. ಪ್ರಸ್ತುತ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
#WATCH | Odisha: NDA's presidential candidate Draupadi Murmu sweeps the floor at Shiv temple in Rairangpur before offering prayers here. pic.twitter.com/HMc9FsVFa7
— ANI (@ANI) June 22, 2022
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಷ್ಟ್ರಪತಿ ಅಭ್ಯರ್ಥಿಯನ್ನು ಬಹಿರಂಗಪಡಿಸಿದರು. ಈ ವೇಳೆ ಅವರು, ಒಡಿಸ್ಸಾದ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‍ಡಿಎ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ ಎಂದು ಘೋಷಿಸಿದ್ದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಬಿಜೆಪಿಯಿಂದ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆ

ಒಂದು ವೇಳೆ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದರೆ, ಇವರೇ ಒಡಿಶಾದ ಮೊದಲ ವ್ಯಕ್ತಿಯಾಗುತ್ತಾರೆ. ಅಲ್ಲದೇ ಭಾರತದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಖ್ಯಾತಿಗೆ ಪಾತ್ರವಾಗಲಿದ್ದಾರೆ.



