ನವದೆಹಲಿ: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡುವಾಗ ಹತ್ತಿರದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ನಾಶಪಡಿಸುವುದು ಸಾಮಾನ್ಯ, ಆದರೆ ದೆಹಲಿಯ ವಾಣಿಜ್ಯಮಳಿಗೆಗಳ ಕಳ್ಳತನಕ್ಕೆ ಬಂದ ಕಳ್ಳನೊಬ್ಬ ಸಿಸಿಟಿವಿ ಕಡೆ ಮುಖ ಮಾಡಿ ಸಖತ್ ಡ್ಯಾನ್ಸ್ ಮಾಡಿದ್ದಾನೆ. ಇವನ ಈ ವಿಡಿಯೋ ಸದ್ಯ ಸಾಮಾಜಿಕ ಜಾಲಾತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಸಿಸಿಟಿವಿ ದೃಶ್ಯದ ಪ್ರಕಾರ ಘಟನೆ ಜುಲೈ 10 ರ ಬೆಳಗಿನ ಜಾವದಂದು ನಡೆದಿದ್ದು, ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ವಿಡಿಯೋ ವೈರಲ್ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
Advertisement
ಕಳ್ಳರು ದೆಹಲಿಯ ವಾಣಿಜ್ಯ ಪ್ರದೇಶಗಳಲ್ಲಿರುವ ಅಂಗಡಿಯ ಶಟರ್‍ಗಳನ್ನು ಕಿತ್ತು, ದರೋಡೆ ಮಾಡಿದ್ದಾರೆ. ಈ ವೇಳೆ ಕಳ್ಳತನಕ್ಕೂ ಮುಂಚೆ ಕಳ್ಳನೊಬ್ಬ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು, ಮಸ್ತ್ ಡ್ಯಾನ್ಸ್ ಸ್ಟೆಪ್ ಹಾಕಿದ್ದಾನೆ.
Advertisement
#WATCH CCTV footage of a thief dancing before he and two other people attempt to break into a shop, in Delhi (10.07.18) pic.twitter.com/zWhyaqqKDP
— ANI (@ANI) July 11, 2018
Advertisement
ಘಟನೆ ಕುರಿತು ಸಿಸಿಟಿಯ ದೃಶ್ಯ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದರಿಂದ, ಕಳ್ಳನ ಡ್ಯಾನ್ಸ್ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ದೆಹಲಿ ಪೊಲೀಸರು ಆರೋಪಿಗಳನ್ನು ಗುರುತು ಹಿಡಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳರು ಅದೇ ದಿನ ರಾತ್ರಿ ಸುಮಾರು 4 ಅಂಗಡಿಗಳಿಗೆ ಕನ್ನ ಹಾಕಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಅಪಹರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.