ಉಡುಪಿ: ರೋಗಿಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಅಂಬುಲೆನ್ಸ್ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
- Advertisement -
ಅಂಬುಲೆನ್ಸ್ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿತ್ತು. ಆದರೆ ಚಾಲಕನ ಅತೀವೇಗ ಮತ್ತು ಅಜಾಗರೂಕತೆಯಿಂದ ಅಂಬುಲೆನ್ಸ್ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‍ಗೆ ಡಿಕ್ಕಿಯಾಗಿದೆ. ಅಂಬುಲೆನ್ಸ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
- Advertisement -
- Advertisement -
ಘಟನೆಯಲ್ಲಿ ಮೂವರು ಮೃತಪಟ್ಟು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -
ಈ ಸಂಬಂಧ ಬೈಂದೂರು ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ: ಖ್ಯಾತ ಗಾಯಕ ಸಿಧು ಮೂಸೆವಾಲಾ ಹಂತಕರಿಗೆ ಎನ್ ಕೌಂಟರ್ ಮೂಲಕ ಉತ್ತರ : ಗುಂಡಿನ ದಾಳಿಗೆ ನಾಲ್ವರು ಹಂತಕರ ಬಲಿ