ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಯ್ಕೆ ಮಾಡಿರುವ ನಾಯಕ ವಿರಾಟ್ ಕೊಹ್ಲಿ ಅವರ ನಿರ್ಧಾರಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಸಮಾಧಾನ ವ್ಯಕ್ತಪಡಸಿದ್ದಾರೆ.
ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಿರಸ ಪ್ರದರ್ಶನ ತೋರಿದ ಬಳಿಕ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ನಾಯಕ ಕೊಹ್ಲಿ ಪ್ರಮುಖ ಮೂರು ಬದಲಾವಣೆಗಳನ್ನು ಮಾಡಿದ್ದರು.
Advertisement
ಮುಖ್ಯವಾಗಿ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಜಾಗದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಸ್ಥಾನ ನೀಡಲಾಗಿದೆ. ಹಾಗೆಯೇ ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಕೈಬಿಡಲಾಗಿದ್ದು ಇಶಾಂತ್ ಶರ್ಮಾ ಅವರಿಗೆ ಸ್ಥಾನ ನೀಡಲಾಗಿದೆ. ಇನ್ನು ಗಾಯಗೊಂಡಿರುವ ವೃದ್ಧಿಮಾನ್ ಸಹಾ ಅವರ ಸ್ಥಾನದಲ್ಲಿ ಪಾರ್ಥಿವ್ ಪಾಟೇಲ್ ಅವರಿಗೆ ಅವಕಾಶ ನೀಡಲಾಗಿದೆ.
Advertisement
Advertisement
ಆದರೆ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಭುವನೇಶ್ವರ್ ಕುಮಾರ್ ಅವರನ್ನು ಕೈ ಬಿಟ್ಟು ಇಶಾಂತ್ ಶರ್ಮಾ ಅವರಿಗೆ ಅಂತಿಮ 11ರ ಬಳಗದಲ್ಲಿ ಸ್ಥಾನ ನೀಡಿದ್ದಕ್ಕೆ ಸೆಹ್ವಾಗ್ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಈ ಕುರಿತು ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಸೆಹ್ವಾಗ್, ಒಂದೇ ಪಂದ್ಯದ ಪ್ರದರ್ಶನದ ಆಧಾರದಿಂದ ಕ್ರಿಕೆಟಿಗರನ್ನು ಅಳೆಯುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
Advertisement
ಭುವನೇಶ್ವರ್ ಕುಮಾರ್ ಉತ್ತಮ ಪ್ರದರ್ಶನ ನೀಡಿದರೂ ಯಾವುದೇ ಕಾರಣವಿಲ್ಲದೆ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಒಂದು ವೇಳೆ ಈ ಪಂದ್ಯದಲ್ಲಿ ಕೊಹ್ಲಿ ಉತ್ತಮ ಪ್ರದರ್ಶನ ನೀಡದೇ ಇದ್ದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿಯನ್ನೇ ಡ್ರಾಪ್ ಮಾಡಬೇಕಾಗುತ್ತದೆ. ಭುವನೇಶ್ವರ್ ಕುಮಾರ್ ಬದಲಿಗೆ ಬೇರೆ ಯಾವುದಾದರೂ ಆಟಗಾರನನ್ನು ಹೊರಗಿಟ್ಟು ಇಶಾಂತ್ ಶರ್ಮಾಗೆ ಅವಕಾಶ ಕೊಡಬಹುದಿತ್ತು. ಆದರೆ ಇಶಾಂತ್ ಶರ್ಮಾ ನೀಳಕಾಯದವರು ಎಂಬ ಕಾರಣಕ್ಕೆ ಅವಕಾಶ ನೀಡಿ, ಭುವನೇಶ್ವರ್ ಅವರ ಆತ್ಮ ವಿಶ್ವಾಕ್ಕೆ ಕೊಹ್ಲಿ ಪೆಟ್ಟು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ನಡೆದ ಮೊದಲ ಟೆಸ್ಟ್ ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದಿದ್ದರೆ, ಎರಡನೇ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ಪಡೆದಿದ್ದರು. ಅಷ್ಟೇ ಅಲ್ಲದೇ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ವೇಳೆ ಟೀಂ ಇಂಡಿಯಾ ಆಫ್ರಿಕಾ ವಿರುದ್ಧ ಗೆಲುವಿನ ಸನಿಹಕ್ಕೆ ಬರಲು ಕಾರಣರಾಗಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ ಗೆಲ್ಲಲು 209 ರನ್ ಗಳ ಗುರಿ ಪಡೆದ ಟೀಂ ಇಂಡಿಯಾದ ಟಾಪ್ ಬ್ಯಾಂಟಿಂಗ್ ವಿಫಲವಾಗಿದ್ದರೂ ಆಶ್ವಿನ್ ಜೊತೆ ಸೇರಿದ ಭುವನೇಶ್ವರ್ 49 ರನ್ ಗಳ ಜೊತೆಯಾಟವಾಡಿದ್ದರು.
ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ಟೀಂ ಇಂಡಿಯಾ ವಿರುದ್ಧ 72 ರನ್ ಗಳ ಅಂತರದಲ್ಲಿ ಗೆಲುವು ಪಡೆಯುವ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದುಕೊಂಡಿದೆ.