ಹುಬ್ಬಳ್ಳಿ: ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ (Kalasa Banduri Yojana) ವಿಸ್ತೃತ ಯೋಜನಾ ವರದಿಗೆ ಅನುಮತಿಯನ್ನು ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahad Joshi) ಹೇಳಿದ್ದಾರೆ.
ವೀಡಿಯೋ ಮೂಲಕ ಮಾಹಿತಿ ಹಂಚಿಕೊಂಡ ಅವರು, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ (AmitShah) ಅವರಿಗೆ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಅನಂತ ಧನ್ಯವಾದಗಳು ತಿಳಿಸುವುದಾಗಿ ಹೇಳಿದರು.
Advertisement
Advertisement
ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡಿದ್ದೆವು. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಬೊಮ್ಮಾಯಿ ಸರ್ಕಾರವೂ ಅತ್ಯಂತ ಪರಿಶ್ರಮ ವಹಿಸಿದೆ, ನಾನು ಬೊಮ್ಮಾಯಿ (Basavaraj Bommai) ಹಾಗೂ ಗೋವಿಂದ್ ಕಾರಜೋಳ (Govind Karajola) ಅವರಿಗೆ ಕೂಡ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಹೊಸವರ್ಷದ ಸಂಭ್ರಮಕ್ಕೆ ಗೋವಾ ಮದ್ಯ ಕರ್ನಾಟಕದತ್ತ – ಒಂದು ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮದ್ಯ ಅಬಕಾರಿ ವಶಕ್ಕೆ
Advertisement
Advertisement
ಜನವರಿ 2 ರಂದು ಮಹದಾಯಿ ವಿಚಾರವಾಗಿ ಕಾಂಗ್ರೆಸ್ (Congress) ಬೃಹತ್ ಸಮಾವೇಶ ಮಾಡಲಿದೆ. ಕಾಂಗ್ರೆಸ್ ಸಮಾವೇಶಕ್ಕೂ ಮುನ್ನವೇ ಯೋಜನೆ ವರದಿಗೆ ಅನುಮೋದನೆ ನೀಡಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಜೆಪಿ (BJP) ಕೌಂಟರ್ ಕೊಟ್ಟಿದೆ. ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸಮಾವೇಶ ಹಮ್ಮಿಕೊಂಡಿದ್ದರು. ಆದರೆ ಸಮಾವೇಶ ಮಾಡೋ ಒಳಗೆ ಕಳಸಾ ಬಂಡೂರಿ ವಿಸ್ತ್ರತ ವರಿದಿಗೆ ಜಲ ಆಯೋಗ ಅನುಮತಿ ನೀಡಿದೆ.