ರಾಯಚೂರು ನಗರದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: 144 ಸೆಕ್ಷನ್ ಜಾರಿ ಮೂಲಕ ಕಾಲುವೆಗೆ ನೀರು

Public TV
1 Min Read
Water crisis in Raichur

ರಾಯಚೂರು: ನಗರದ ಜನರಿಗೆ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ (Water Crisis) ಬಗೆಹರಿಸಲು ಜಿಲ್ಲಾಡಳಿತ 144 ಸೆಕ್ಷನ್ (Section 144) ಜಾರಿಗೊಳಿಸಿ ಟಿಎಲ್‍ಬಿಸಿ ಕಾಲುವೆಗೆ ನೀರು ಹರಿಸಲು ಮುಂದಾಗಿದೆ. ತುಂಗಭದ್ರಾ (Tungabhadra Eda Dande Kaluve) ಎಡದಂಡೆ ಕಾಲುವೆ ಪ್ರದೇಶದ ಸುತ್ತಮುತ್ತಲು 100 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ.

Water crisis in Raichur 1

ನಗರದಲ್ಲಿ ಐದು ದಿನಕ್ಕೆ ಒಂದು ಬಾರಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಜನ ನೀರಿಗಾಗಿ ಪರದಾಟ ನಡೆಸಿದ್ದಾರೆ. ಈ ಹಿನ್ನೆಲೆ ತುಂಗಭದ್ರಾ ಎಡದಂಡೆ ಕಾಲುವೆ ಮೂಲಕ ನವಲಕಲ್ ಜಲಾಶಯಕ್ಕೆ ನೀರು ಹರಿಸಿ ಬಳಿಕ ರಾಂಪುರ ಕೆರೆ ಮೂಲಕ ರಾಯಚೂರು ನಗರಕ್ಕೆ ನೀರು ಹರಿಸಲು ಜಿಲ್ಲಾಡಳಿತ ಮುಂದಾಗಿದೆ.ಇದನ್ನೂ ಓದಿ: ಹೆಡ್‍ಕಾನ್ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಕಾಲುವೆಗಳ ಪ್ರದೇಶದಲ್ಲಿ ಅನಧಿಕೃತವಾಗಿ ರೈತರು ಹೊಲಗಳಿಗೆ ನೀರನ್ನು ಹರಿಸುವುದಾಗಲಿ ಅಥವಾ ಪಂಪ್ ಸೆಟ್ ಹಾಗೂ ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನ ಸಂರ್ಪೂಣವಾಗಿ ನಿಷೇಧಿಸಲಾಗಿದೆ. ಜೂನ್ 17 ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 27 ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅವಧಿಯ ಪಠ್ಯಗಳಿಗೆ ಸರ್ಕಾರ ಕತ್ತರಿ- ಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಠ್ಯಕ್ಕೆ ಬ್ರೇಕ್

Share This Article