ಚಿಕ್ಕಮಗಳೂರು: ಶಾಶ್ವತ ಬರಗಾಲಕ್ಕೆ ತುತ್ತಾದ ತಾಲೂಕು ಎಂದೇ ಕರೆಯುವ ಕಡೂರಿನ ಖಂಡುಗದಹಳ್ಳಿಯ ದೇವಾಲಯದಲ್ಲಿನ ಬೋರ್‌ವೆಲ್‌ನಲ್ಲಿ ಎರಡು ದಿನಗಳಿಂದ ನಿರಂತರವಾಗಿ ನೀರು ಉಕ್ಕಿಬರುತ್ತಿದೆ.
ಖಂಡುಗದಹಳ್ಳಿಯ ಸೋಮೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಒಂದು ವರ್ಷದ ಹಿಂದೆ ಬೋರ್‌ವೆಲ್ ಕೊರೆಸಿದ್ದರು. ಬೋರ್‌ವೆಲ್ ಕೊರೆದಾಗಿನಿಂದ ಅರ್ಧ ಇಂಚು ನೀರು ಬರುತ್ತಿತ್ತು. ಆದರೆ ಎರಡು ದಿನಗಳಿಂದ ಬೋರ್‌ನಿಂದ ನಿರಂತರವಾಗಿ ನೀರು ಉಕ್ಕಿ ಹರಿಯುತ್ತಿದೆ. ಬರದ ನಾಡಲ್ಲಿ ಈ ವಿಸ್ಮಯ ನಡೆದಿರುವುದು ಸೋಮೇಶ್ವರ ಸ್ವಾಮಿಯ ಮಹಿಮೆ ಎಂದು ಭಕ್ತರು ಹಾಡಿ ಹೊಗಳುತ್ತಿದ್ದಾರೆ.
Advertisement
Advertisement
ಹಿಂದೊಮ್ಮೆ ದೇವಾಲಯದಲ್ಲಿ ನೀರಿನಲ್ಲಿ ದೀಪ ಹಚ್ಚಿದ್ದು ಜನರನ್ನು ಅಚ್ಚರಿಗೊಳಿಸಿತ್ತು. ಈಗ ಬೋರ್‌ವೆಲ್‌ನಲ್ಲಿ ನೀರು ಉಕ್ಕುತ್ತಿರುವುದು ಜನರ ಆಶ್ಚರ್ಯಕ್ಕೆ ಕಾರಣವಾಗಿದೆ. ಹೀಗೆ ಈ ಭಾಗದಲ್ಲಿ ಸೋಮೇಶ್ವರ ಸ್ವಾಮಿಯಿಂದ ಹಲವು ವಿಸ್ಮಯಗಳು ನಡೆಯುತ್ತಲೇ ಇರುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews