ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಬೆನ್ನಲ್ಲೇ ಕೆಆರ್‌ಎಸ್ ಅಣೆಕಟ್ಟೆಯಿಂದ (KRS Dam) ಕಾವೇರಿ ನದಿ (Kaveri River) ಮೂಲಕ ತಮಿಳುನಾಡಿಗೆ (Tamil Nadu) ಮಂಗಳವಾರ ರಾತ್ರಿಯಿಂದಲೇ 5000 ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ.
ಕೆಆರ್‌ಎಸ್ ಡ್ಯಾಂನ +80ರ ಗೇಟ್ ಮೂಲಕ ನೀರನ್ನು ಹರಿಸಲಾಗುತ್ತಿದೆ. ರೈತರ ಆಕ್ರೋಶದ ನಡುವೆ ರಾತ್ರಿಯಿಂದಲೇ 7,380 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ನೀರು ಬಿಡುಗಡೆಯಿಂದ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಕುಸಿಯಲಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಕಾವು ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ
Advertisement
Advertisement
ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ:
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 101.58 ಅಡಿಗಳು
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
ಇಂದಿನ ಸಾಮರ್ಥ್ಯ – 24.075 ಟಿಎಂಸಿ
ಒಳ ಹರಿವು – 2,300 ಕ್ಯೂಸೆಕ್
ಹೊರ ಹರಿವು – 7,380 ಕ್ಯೂಸೆಕ್ ಇದನ್ನೂ ಓದಿ: ಸರ್ಕಾರಿ ಭೂಮಿ ಒತ್ತುವರಿ – ಪ್ರಕಾಶ್ ರಾಜ್‌ಗೆ ನೋಟಿಸ್
Advertisement
Web Stories