ಮಂಡ್ಯ: ಕಳೆದ 10 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಕೆಆರ್‌ಎಸ್ (KRS) ಅಣೆಕಟ್ಟು 100 ಅಡಿ ತುಂಬಿದೆ. ರೈತರ ಒತ್ತಾಯದ ಮೇರೆಗೆ ನಾಳೆ ಸಂಜೆಯಿಂದ ಹದಿನೈದು ದಿನಗಳ ಕಾಲ ವಿ.ಸಿ.ನಾಲೆಗೆ (VC Canal) ನೀರು ಹರಿಸಲು ಮಂಡ್ಯ ಜಿಲ್ಲಾಡಳಿತ ತೀರ್ಮಾನ ಮಾಡಿದೆ.
ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೃಷ್ಣರಾಜಸಾಗರದಿಂದ ಸಾಮಾನ್ಯವಾಗಿ ಪ್ರತಿವರ್ಷ ಜುಲೈ ಎರಡನೇ ವಾರದಿಂದ ವಿ.ಸಿ.ನಾಲೆಗೆ ನೀರು ಹರಿಸಲಾಗುತ್ತಿತ್ತು. ಆದರೆ ಈ ಬಾರಿ ಮಾರ್ಚ್‌ನಲ್ಲಿ ನಾಲೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ನಾಳೆ ಸಂಜೆಯಿಂದ ಮುಂದಿನ 15 ದಿನಗಳ ಕಾಲ ವಿ.ಸಿ.ನಾಲೆಗೆ ನೀರು ಹರಿಸಲಾಗುತ್ತಿದೆ. ಇದನ್ನೂ ಓದಿ: ಸಂಸದ ಸುಧಾಕರ್ ಅಭಿನಂದನಾ ಸಮಾವೇಶದಲ್ಲಿ ಎಣ್ಣೆ, ಬಾಡೂಟಕ್ಕೆ ಮುಗಿಬಿದ್ದ ಜನ
ಇದು ಕೇವಲ ಕೆರೆ ಕಟ್ಟೆ ತುಂಬಿಸಲು ಹಾಗೂ ಜಾನುವಾರುಗಳ ಹಿತದೃಷ್ಟಿಯಿಂದ ನಾಲೆಗೆ ನೀರು ಹರಿಸಲು ತೀರ್ಮಾನಿಸಲಾಗಿದ್ದು, ಮುಂದಿನ 15 ದಿನಗಳ ನಂತರ ಮುಂಗಾರು ಮಳೆಯ ಪರಿಸ್ಥಿತಿ ಹಾಗೂ ಕೆಆರ್‌ಎಸ್ ಅಣೆಕಟ್ಟಿನ ಒಳಹರಿವು ಗಮನಿಸಿಕೊಂಡು ರೈತರ ಬೆಳೆಗಳಿಗೂ ನೀರು ಹರಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ 2 ಅಂತಸ್ತಿನ ಕಟ್ಟಡ ಕುಸಿತ – ಮೂವರು ಸಾವು, 3 ಮಂದಿಗೆ ಗಾಯ