ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೆಆರ್‌ಎಸ್ ಡ್ಯಾಂನಿಂದ ನೀರು ಪೋಲು

Public TV
1 Min Read
KRS Dam

ಮಂಡ್ಯ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾವಿರಾರು ಕ್ಯೂಸೆಕ್ ನೀರು ಪೋಲಾಗಿರುವ ಘಟನೆ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಲ್ಲಿ (KRS Dam) ಜರುಗಿದೆ.

ಭಾನುವಾರ ರಾತ್ರಿ ಏಕಾಏಕಿ ಕೆಆರ್‌ಎಸ್ ಡ್ಯಾಂನ +80 ಗೇಟ್ ಓಪನ್ ಆಗಿ ನದಿಗೆ ನೀರು ಹರಿದು ವ್ಯರ್ಥವಾಗಿದೆ. ಭಾನುವಾರ ರಾತ್ರಿ ಓಪನ್ ಆಗಿರುವ ಗೇಟ್‌ನಿಂದ ಸೋಮವಾರ ರಾತ್ರಿಯವರೆಗೂ ಡ್ಯಾಂ ನೀರು ಹರಿದು ನದಿ ಸೇರಿದೆ. ಗೇಟ್ ಓಪನ್ ಆಗಿದ್ದರೂ ಸಹ ಅಧಿಕಾರಿಗಳು ಗೇಟ್ ಮುಚ್ಚದೇ ನಿರ್ಲಕ್ಷ್ಯ ತೋರುವುದು ಮೇಲ್ನೋಟಕ್ಕೆ ತಿಳಿದಿದೆ. ಇದನ್ನೂ ಓದಿ: 57.64 ಲಕ್ಷದ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪ – ಲಿಂಗಸುಗೂರು ಪುರಸಭೆ ಮುಖ್ಯಾಧಿಕಾರಿ ಅಮಾನತು

ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ 2 ಸಾವಿರ ಕ್ಯೂಸೆಕ್ ನೀರು ನದಿ ಪಾಲು ಆಗಿದೆ. ಗೇಟ್ ಇದ್ದಕ್ಕಿದ್ದಂತೆ ಯಾಕೆ? ಹೇಗೆ? ಓಪನ್ ಆಯಿತು ಎಂಬುದು ಇನ್ನೂ ನಿಗೂಢವಾಗಿದೆ. ಸಿಬ್ಬಂದಿಗಳ ಯಡವಟ್ಟಿನಿಂದ ಗೇಟ್ ಓಪನ್ ಆಯ್ತಾ ಎಂಬ ಪ್ರಶ್ನೆ ರೈತರಲ್ಲಿ ಮೂಡಿದೆ. ಅಥವಾ ಸಮಸ್ಯೆ ಉಂಟಾಗಿ ಓಪನ್ ಆಯ್ತಾ ಎಂಬುದು ಅಸ್ಪಷ್ಟವಾಗಿದೆ. ಸದ್ಯ ಅಧಿಕಾರಿಗಳು ಸಿಬ್ಬಂದಿಗಳು ಸೋಮವಾರ ರಾತ್ರಿ ಕಾರ್ಯಾಚರಣೆ ನಡೆಸಿ ಗೇಟ್ ಬಂದ್ ಮಾಡಿದ್ದಾರೆ. ಡ್ಯಾಂನಲ್ಲಿ ಹೆಚ್ಚಿನ ಪ್ರಮಾಣದ ನೀರು ಇದ್ದಿದ್ದರಿಂದ ಹರಸಾಹಸಪಟ್ಟು ಗೇಟ್ ಬಂದ್ ಮಾಡಿದ್ದಾರೆ. ಇದನ್ನೂ ಓದಿ: ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ವಿನಯ್‌, ರಜತ್‌ ಬಂಧನ ಕೇಸ್‌ಗೆ ಟ್ವಿಸ್ಟ್‌ – ಮಧ್ಯರಾತ್ರಿಯೇ ಇಬ್ಬರೂ ರಿಲೀಸ್‌

Share This Article