ರಾಯಚೂರು: ಸತತವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆ ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿದ್ದು, ಮನೆಯ ನೆಲದಿಂದ ನೀರು ಉಕ್ಕಿ ಬರುತ್ತಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
Advertisement
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಜಾಗೀರ್ ಗ್ರಾಮದ ಹಲವು ಮನೆಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ನೀರು ಎತ್ತಿ ಹಾಕಲಾಗದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಅಲ್ಲದೇ ಮನೆಯಲ್ಲಿ ಸಂಗ್ರಹಿಸಿದ್ದ ಧವಸ ಧಾನ್ಯಗಳು ಸಹ ನೀರು ಪಾಲಾಗಿದ್ದು, ನೀರಿನ ಪ್ರಮಾಣ ಹೆಚ್ಚಳವಾಗಿ ಭೂಕುಸಿತವಾಗಬಹುದು ಎನ್ನುವ ಭೀತಿಯಲ್ಲಿದ್ದಾರೆ.
Advertisement
Advertisement
ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ರಾಂಪುರ ಏತ ನೀರಾವರಿ ಯೋಜನೆಯಿಂದ ಈ ಭಾಗದಲ್ಲಿ ಅಂತರ್ಜಲ ಪ್ರಮಾಣ ಹೆಚ್ಚಾಗುತ್ತಾ ಬಂದಿದೆ. ಆದರೆ ಪ್ರಸ್ತುತ ಸತತ ಮಳೆ ಬರುತ್ತಿರುವುದರಿಂದ ಅಂತರ್ಜಲ ಮನೆಯ ನೆಲದಲ್ಲಿ ಉಕ್ಕಿ ಬರುತ್ತಿದೆ. ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗೆ ಜಿಲ್ಲಾಡಳಿತವಾಗಲಿ, ಕಂದಾಯ ಇಲಾಖೆ ಅಧಿಕಾರಿಗಳಾಗಿ ಸ್ಥಳಕ್ಕೆ ಇದುವರೆಗೂ ಭೇಟಿ ನೀಡಿಲ್ಲವೆಂದು ಗ್ರಾಮಸ್ಥ ಶಿವಪುತ್ರಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.