ಚೆನ್ನೈ: ದೇಶದಲ್ಲಿ ಹಲವೆಡೆ ಸರಿಯಾದ ಮಳೆಯಿಲ್ಲದೆ ಜನರು ಬರದಿಂದ ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಚಿನ್ನ, ಪ್ಲಾಟಿನಂಗಳಿಗಿಂತ ನೀರು ಅಮೂಲ್ಯವಾದದ್ದು, ಅದನ್ನು ಮಿತವಾಗಿ ಬಳಸಿ, ಉಳಿಸಿ ಎಂದು ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಮನವಿ ಮಾಡಿದ್ದಾರೆ.
ತಮಿಳಿನ `ಗೂರ್ಖಾ’ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಸ್‍ಪಿಬಿ ನೀರಿನ ಮಹತ್ವದ ಬಗ್ಗೆ ಹಾಗೂ ನೀರನ್ನು ಮಿತವಾಗಿ ಬಳಸಬೇಕೆಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಬಳಿ ಮನವಿ ಮಾಡಿಕೊಂಡರು. ಹಾಗೆಯೇ ಚಿನ್ನ, ಪ್ಲಾಟಿನಂಗಿಂತಲೂ ನೀರು ಅತ್ಯಮೂಲ್ಯವಾದದ್ದು. ಜೀವಿಸಲು ನೀರು ಬೇಕು. ನೀರಿಗೆ ನಾವು ಬೆಲೆಕಟ್ಟಲು ಸಾಧ್ಯವಿಲ್ಲ. ಚೆನ್ನೈ ಅಂತಹ ಮಹಾನಗರಗಳಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ದೇಶದ ಹಲವೆಡೆ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ ಎಂದರು.
Advertisement
Advertisement
ಹಾಗೆಯೇ ಇಂದು ನಾನು ಮನೆಯಲ್ಲಿ ಅರ್ಧ ಬಕೆಟ್ ನೀರಿಗಾಗಿ ಅರ್ಧ ಗಂಟೆ ಕಾಯುವಂತಾಯಿತು. ಕೊನೆಗೆ ಸ್ಥಾನಕ್ಕೆ ನೀರಿಲ್ಲದಂತಾಯಿತು ಎಂದು ತಾವು ನೀರಿಗಾಗಿ ಎದುರಿಸಿದ ಪರಿಸ್ಥಿತಿಯನ್ನು ಹಂಚಿಕೊಂಡರು.
Advertisement
ಇಂದು ಹನಿ ನೀರಿಗಾಗಿ ಅದೆಷ್ಟೋ ಜನರು ಪರದಾಟುತ್ತಿದ್ದಾರೆ. ಇಂದು ನೀರಿನ ಸಮಸ್ಯೆ ಕಾಡುತ್ತಿರುವುದಕ್ಕೆ ನಾವುಗಳೇ ಕಾರಣ. ನೀರನ್ನು ಸುಮ್ಮನೆ ಪೋಲು ಮಾಡುವುದನ್ನು ಬಿಡಿ. ನೀರನ್ನು ಉಳಿಸಲು ಕೆಲವು ಸರಳ ವಿಧಾನಗಳು ನಮ್ಮೆಲ್ಲರಿಗೂ ಗೊತ್ತಿರುತ್ತದೆ. ಆದರೆ ನಾವು ಅದನ್ನು ಪಾಲಿಸುವುದಿಲ್ಲ. ಪ್ರತಿದಿನ ನಾನಾ ರೀತಿಯ ಬಟ್ಟೆಗಳನ್ನು ಧರಿಸುವುದನ್ನು ಬಿಟ್ಟು, ವಾರಕ್ಕೆ ಕೇವಲ ಎರಡು ಜೊತೆ ಬಟ್ಟೆ ಧರಿಸಿ. ಇದರಿಂದ ಬಟ್ಟೆ ತೊಳೆಯಲು ಖರ್ಚಾಗುವ ಅನಗತ್ಯ ನೀರು ಉಳಿಯುತ್ತದೆ. ನೀರನ್ನು ಮಿತವಾಗಿ ಬಳಿಸಿ ಎಂದು ಕಳವಳ ವ್ಯಕ್ತಪಡಿಸಿದರು.
Advertisement
ಚೆನ್ನೈನಂತಹ ದೊಡ್ಡ ದೊಡ್ಡ ನಗರಗಳಲ್ಲಿ ನೀರಿನ ಸಮಸ್ಯೆಗೆ ಜನರು ತತ್ತರಿಸಿ ಹೋಗಿದ್ದಾರೆ. ಬೆಳೆಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದಾರೆ. ಅಲ್ಲದೆ ಕುಡುಯುವ ನೀರಿನ ಸಮಸ್ಯೆ ಕಾಡುತ್ತಿದ್ದು, ಎರಡು ದಿನಕೊಮ್ಮೆ ಅಥವಾ ವಾರಕ್ಕೊಮ್ಮೆ ಟ್ಯಾಂಕರ್ ಗಳಲ್ಲಿ ಎಲ್ಲೆಡೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ ಚೆನ್ನೈನ ದೊಡ್ಡ ದೊಡ್ಡ ಐಟಿ ಕಂಪನಿಗಳಿಗೂ ನೀರಿ ಅಭಾವದ ಬಿಸಿ ಮುಟ್ಟಿದ್ದು, ಹೊರರಾಜ್ಯಗಳಿಂದ ಕೆಲಸಕ್ಕೆ ಬಂದ ಸಿಬ್ಬಂದಿಗಳಿಗೆ ನೀರು ಪೂರೈಸಲಾಗದೆ ರಜೆ ನೀಡಲಾಗಿದೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]