ಆನೇಕಲ್: ನೀರು ಹಿಡಿಯುವ ವಿಚಾರಕ್ಕೆ ಮನೆಗೆ ನುಗ್ಗಿ ರೌಡಿಗಳು ದಾಂಧಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಪತ್ರಿಕಾ ಏಜೆಂಟ್ ಆಗಿರುವ ರಾಜಪ್ಪ ಹಾಗೂ ಅವರ ಮನೆಯವರು ಹಲ್ಲೆಗೊಳಗಾದವರು. ಆನೇಕಲ್ ತಾಲೂಕಿನ ಕಾಳನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ನೀರು ಹಿಡಿಯುವ ವಿಚಾರಕ್ಕೆ ಎರಡು ಕುಟುಂಬದ ನಡುವೆ ಗಲಾಟೆಯಾಗಿದೆ. ಇದರಿಂದ ಕೋಪಗೊಂಡ ರೌಡಿಗಳು ಪೇಪರ್ ಏಜೆಂಟ್ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ಮೇರಿ ಹಾಗೂ ಅರುಣ್, ಬೇಬಿ ಎಂಬುವವರು ಗಲಾಟೆ ನಡೆಸಿದ್ದಾರೆ. ಮನೆಯ ವಸ್ತುಗಳನ್ನು ಬಿಸಾಡಿ, ಮಹಿಳೆಯರ ಮೇಲೂ ದರ್ಪ ತೋರಿದ್ದಾರೆ. ಗಲಾಟೆ ಬಳಿಕ ಬೇಬಿ, ಯುವಕರನ್ನು ಕರೆಸಿಕೊಂಡಿದ್ದಾರೆ. ಹಲ್ಲೆ ಮಾಡಿದ ಬಳಿಕ ಮನೆ ಧ್ವಂಸ ಮಾಡಿದ್ದಾರೆ. ಹತ್ತಕ್ಕೂ ಹೆಚ್ಚು ರೌಡಿಗಳು ದಾಂಧಲೆ ನಡೆಸಿದ್ದರು. ಇದನ್ನೂ ಓದಿ: ಅನಾರೋಗ್ಯದಿಂದ ಜಾಮೀನಿನ ಮೇಲೆ ಹೊರಬಂದಿರೋ ಪ್ರಜ್ಞಾ ಸಿಂಗ್‌ರಿಂದ ಕ್ರಿಕೆಟ್, ಡ್ಯಾನ್ಸ್ – ವೀಡಿಯೋ ವೈರಲ್
ಪ್ರಕರಣ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯವರಿಂದ ದೂರು ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿಯಿಂದ ದೆಹಲಿಯಲ್ಲಿ ಮೂಲಸೌಕರ್ಯ ಸುಧಾರಿಸಿದೆ: ಅಮಿತ್ ಶಾ