– ನಾಲ್ಕು ಆಯ್ಕೆಗಳನ್ನು ಮುಂದಿಟ್ಟ ಬಿಡಬ್ಲೂಎಸ್‌ಎಸ್‌ಬಿ
ಬೆಂಗಳೂರು: ಡಿಸಿಎಂ ಡಿಕೆಶಿ ನೀರಿನ ದರ ಏರಿಕೆ ಬಗ್ಗೆ ಸುಳಿವು ಕೊಟ್ಟ ಬೆನ್ನಲ್ಲೇ ಇದೀಗ ಜಲಮಂಡಳಿ (BWSSB)ನೀರಿನ ದರ ಏರಿಕೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಜಲಮಂಡಳಿ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರದ ಮುಂದೆ ನಾಲ್ಕು ಆಯ್ಕೆಗಳನ್ನು ಇಟ್ಟಿದೆ. ಶೇಕಡಾ ಎಷ್ಟು? ದರ ಏರಿಕೆ ಮಾಡಬೇಕು ಎಂದು ನಾಲ್ಕು ಮಾದರಿಯ ದರಗಳನ್ನ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದೆ. ಈ ಕುರಿತು ಕೆಲವೇ ದಿನಗಳಲ್ಲಿ ಸರ್ಕಾರ ಪ್ರಸ್ತಾವನೆ ಫೈನಲ್ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ
ಇತ್ತೀಚಿಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಜಲಮಂಡಳಿ ಸಭೆಯಲ್ಲಿ ಮಾತನಾಡಿ, ಎಲ್ಲಾ ಫ್ರೀಯಾಗಿ ಕೊಟ್ಟರೆ ಸರ್ಕಾರ ಹೇಗೆ ನಡೆಯಬೇಕು? ಇನ್ಮೇಲೆ ಕಾವೇರಿ ನೀರನ್ನು ಫ್ರೀಯಾಗಿ ಕೊಡೋಕೆ ಆಗಲ್ಲ. ಒಂದು ಪೈಸೆಯಾದರೂ ಬಿಲ್ ಕಟ್ಟಬೇಕು. ಸರ್ಕಾರಿ ನೌಕರರು ಸಂಬಳ ಜಾಸ್ತಿ ಮಾಡಿ ಅಂತಿದ್ದಾರೆ. ಹೀಗಾಗಿ ಎಲ್ಲಾ ಸರಿದೂಗಿಸಿಕೊಂಡು ಹೋಗಬೇಕಲ್ವಾ ಎಂದಿದ್ದರು.
ಜೊತೆಗೆ ವಿದ್ಯುತ್ ದರ ಏರಿಕೆಗೆ 5 ವಿದ್ಯುತ್ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದವು. 3 ವರ್ಷದ ದರ ಏರಿಕೆಯನ್ನು ಈಗಲೇ ಪ್ರಕಟಿಸಿ ಎಂದು ಮೊರೆ ಇಟ್ಟು, ಪ್ರತಿ ಯೂನಿಟ್‌ಗೆ 2025-26ರ ಸಾಲಿನಲ್ಲಿ 67 ಪೈಸೆ, 2026-27ರಲ್ಲಿ 74 ಪೈಸೆ ಮತ್ತು 2027-28ರಲ್ಲಿ 91 ಪೈಸೆ ಹೆಚ್ಚಳಕ್ಕೆ ಅನುಮೋದನೆ ನೀಡಿ ಎಂದು ಕೋರಿದ್ದವು.ಇದನ್ನೂ ಓದಿ: ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಈಶ್ವರ್ ಖಂಡ್ರೆ ಸೂಚನೆ