ಮಂಡ್ಯ: ಜುಲೈ 8 ರಿಂದ ಕೆಆರ್‌ಎಸ್‌ನಿಂದ (KRS) ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ (Chaluvarayaswamy) ತಿಳಿಸಿದರು.
ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಮಟ್ಟ 100 ಅಡಿಗಿಂತ ಹೆಚ್ಚುವರಿಯಾಗಿರುವುದರಿಂದ ಜು.6 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ, ಜು.8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ ಬಿಎಸ್‍ವೈಗೆ ಮತ್ತೆ ಸಮನ್ಸ್
Advertisement
Advertisement
ಕಳೆದ ಸಾಲಿನಲ್ಲಿ ಬರಗಾಲದ ಹಿನ್ನೆಲೆ ರೈತರ ಬೇಡಿಕೆಯಂತೆ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿ ತಲುಪಿದ ನಂತರ ನೀರು ಹರಿಸುವುದಾಗಿ ಭರವಸೆ ನೀಡಲಾಗಿತ್ತು. ವಿ.ಸಿ.ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿದ್ದು, ರೈತರಿಗೆ ನೀರು ನೀಡಲು ತೊಂದರೆಯಾಗುತ್ತದೆ ಎಂದು ಹಲವಾರು ದೂರುಗಳು ಕೇಳಿ ಬಂದಿತ್ತು. ಇತ್ತೀಚೆಗೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಲೆಗಳಿಗೆ ನೀರು ಹರಿಸಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಾಗಿದೆ ಎಂದರು.
Advertisement
Advertisement
ಜು.6 ರಂದು ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಜು.8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಪ್ರಾರಂಭಿಸಿ ಕೊಂಡು ಉತ್ತಮ ಬೆಳೆ ಬೆಳೆಯಿರಿ. ರೈತರೊಂದಿಗೆ ಸರ್ಕಾರ ಸದಾ ಇದ್ದು, ಅವರ ಶ್ರೇಯೋಭಿವೃದ್ದಿಗೆ ಸದಾ ಚಿಂತಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಹಿಷ್ಣು ಆಗಿರುವವರನ್ನು ಕೆದಕುವುದು ಕೆಲವರ ಚಾಳಿ – ರಾಹುಲ್ ಹೇಳಿಕೆಗೆ ಪೇಜಾವರ ಶ್ರೀ ಕಿಡಿ