ಮಂಡ್ಯ: ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಬಿಡುತ್ತಿದ್ದ ನೀರಿನಲ್ಲಿ ಹೆಚ್ಚಳವಾಗಿದ್ದು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಕೆಆರ್‍ಎಸ್ ಹೊರ ಹರಿವು ಹೆಚ್ಚಳ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಕೆಆರ್‍ಎಸ್ ಅಣೆಕಟ್ಟೆ ಹೊರ ಹರಿವಿನಲ್ಲಿ ಹೆಚ್ಚಳವಾಗಿದ್ದು, 7,883 ಕ್ಯೂಸೆಕ್ ನಿಂದ 10,129 ಕ್ಯೂಸೆಕ್ ಗೆ ಹೆಚ್ಚಳ ಮಾಡಲಾಗಿದೆ. ಇದರಲ್ಲಿ ಸುಮಾರು 3 ಸಾವಿರ ಕ್ಯೂಸೆಕ್ ನಾಲೆಗಳಿಗೆ ಬಿಡಲಾಗಿದ್ದು, ಉಳಿದ 7 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ಒಳ ಹರಿವು ಗಣನೀಯವಾಗಿ ಇಳಿಯುತ್ತಿದ್ದರೂ ತಮಿಳುನಾಡಿಗೆ ನೀರು ಬಿಡುತ್ತಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
Advertisement
Advertisement
ಕೆಆರ್‌ಎಸ್ ಅಣೆಕಟ್ಟೆಯ ಗರಿಷ್ಠ ಮಟ್ಟ 124.80 ಅಡಿ ಇದ್ದು, ಇಂದಿನ ಮಟ್ಟ 85.76 ಅಡಿ ಇದೆ. ಒಳ ಹರಿವು 3,471 ಕ್ಯೂಸೆಕ್ ಇದ್ದು, ಹೊರ ಹರಿವು 10,129 ಕ್ಯೂಸೆಕ್ ಆಗಿದೆ. ಪ್ರಸ್ತುತ 14.097 ಟಿಎಂಸಿ ನೀರು ಸಂಗ್ರಹವಾಗಿದೆ.
Advertisement