ಚಿಕ್ಕೋಡಿ: ಮಹಾರಾಷ್ಟ್ರದ (Maharashtra) ಪಶ್ಚಿಮ ಘಟ್ಟ ಪ್ರದೇಶದಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಹಾರಾಷ್ಟ್ರದ ಜಲಾಶಯಗಳು ಭರ್ತಿ ಹಂತ ತಲುಪಿವೆ. ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ.
ಕೊಲ್ಲಾಪುರ ಜಿಲ್ಲೆಯ ರಾಧಾನಗರಿ ಜಲಾಶಯ (Radhanagari Dam) ಸಂಪೂರ್ಣ ಭರ್ತಿ ಹಿನ್ನಲೆಯಲ್ಲಿ ದೂದ್‌ಗಂಗಾ ನದಿ (Doodh Ganga River) ಮೂಲಕ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 8.5 ಟಿಎಂಸಿ ಸಾಮರ್ಥ್ಯದ ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ 10 ಸಾವಿರ ಕ್ಯೂಸೆಕ್ ನೀರು ದೂದ್‌ಗಂಗಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಇನ್ಸ್ಟಾದಲ್ಲಿ ಬೆಂಗಳೂರಿಗರ ಬಗ್ಗೆ ನಾಲಗೆ ಹರಿಬಿಟ್ಟ ಒಡಿಶಾ ಯುವತಿ
ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ದೂದ್‌ಗಂಗಾ ನದಿ ತೀರದ ಜನರು ನದಿ ಪಾತ್ರಕ್ಕೆ ಇಳಿಯದಂತೆ ತಾಲೂಕಾಡಳಿತದಿಂದ ಸೂಚನೆ ನೀಡಲಾಗಿದೆ. ಇನ್ನೂ ಕೃಷ್ಣಾ ನದಿಗೆ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಬಳಿ 58 ಸಾವಿರ ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿದೆ.