ಬೆಳಗಾವಿ(ಚಿಕ್ಕೋಡಿ): ನೆರೆಯ ಮಹಾರಾಷ್ಟ್ರದಲ್ಲಿ ವರಣನ ಆರ್ಭಟ ಜೋರಾಗಿದ್ದು, ಕೊಯ್ನಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದ್ದು, ಮತ್ತೆ ರಾಜ್ಯದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಕೊಯ್ನಾ ಡ್ಯಾಮ್ ನಿಂದ 87,338 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಕೃಷ್ಣಾ ನದಿಯನ್ನು ಸೇರುತ್ತಿದೆ. ಇದರಿಂದ ಚಿಕ್ಕೋಡಿ ತಾಲೂಕಿನ ಕೆಳಹಂತದ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು- ಕಲ್ಲೋಳ ಸೇತುವೆ ಜಲಾವೃತಗೊಂಡಿದ್ದು, ಇಂದು ಬಿಟ್ಟಿರುವ ನೀರು ನಾಳೆ ರಾಜ್ಯ ಪ್ರವೇಶಿಸುವ ಸಾಧ್ಯತೆಯಿದೆ.
Advertisement
Advertisement
ಕೊಯ್ನಾ ಜಲಾಶಯಕ್ಕೆ 62,227 ಕ್ಯೂಸೆಕ್ ನೀರು ಒಳ ಹರಿವು ಇದ್ದು, ಕೊಯ್ನಾ ಜಲಾಶಯದ ಆಡಳಿತ ಮಂಡಳಿ ಮಳೆ ಪ್ರಮಾಣ ನೋಡಿ ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಿದೆ. 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯದಲ್ಲಿ ಸದ್ಯ 104.92 ಟಿಎಂಸಿ ನೀರು ಸಂಗ್ರಹವಾಗಿದೆ. ಆದ್ದರಿಂದ 10 ಅಡಿ ಗೇಟ್ ಎತ್ತರಿಸಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.