ಕಲಬುರಗಿ: ಆಗಸ್ಟ್ 13ರಿಂದ 15ರ ವರೆಗೆ ಕಲಬುರಗಿಯಲ್ಲಿ (Kalaburagi) ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲಗಳಲ್ಲಿ ಒಂದಾದ ಭೀಮಾ ನದಿಯಲ್ಲಿ ಪೂರ್ತಿಯಾಗಿ ನಿಂತಿರುವುದರಿಂದ ಸರಡಗಿ ಪಂಪ್‍ಹೌಸನಲ್ಲಿರುವ ಮೋಟಾರುಗಳು ಸ್ಥಗಿತಗೊಳಿಸಲಾಗಿದೆ. ಆದ್ದರಿಂದ ನಗರಕ್ಕೆ ನೀರು ಸರಬರಾಜು ಮಾಡುವ ಕೋಟನೂರು (ಡಿ) ಹಾಗೂ ಶೋರಗುಂಬಜ್ ಜಲಶುದ್ಧೀಕರಣ ಕೇಂದ್ರದಿಂದ ನೀರು ಸರಬರಾಜಾಗುವ ಬಡಾವಣೆಗಳಿಗೆ 2026ರ ಆಗಸ್ಟ್ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ATM ದರೋಡೆಕೋರರು ಕೊನೆಗೂ ಅರೆಸ್ಟ್
ಕಲಬುರಗಿ ನಗರದ ಸಾರ್ವಜನಿಕರು ಮಹಾನಗರಪಾಲಿಕೆ, ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಹಾಗೂ ಮೆ. ಎಲ್ & ಟಿ ಲಿಮಿಟೆಡ್ ಇವರೊಂದಿಗೆ ಸಹಕರಿಸಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ, ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲೆಲ್ಲಿ ವ್ಯತ್ಯಯ?
ಬಿದ್ದಾಪೂರ, ರಾಯರಗುಡ್ಡಿ, ವಿಶಾಲ ನಗರ, ಅಂಬಿಕಾ ನಗರ, ಪಿಂಪ್ಲಿ ಟೆಂಪಲ್, ಪಿ & ಟಿ ಕಾಲೋನಿ, ವಿದ್ಯಾನಗರ, ಯಶವಂತ ನಗರ, ಕರುಣೇಶ್ವರ ನಗರ, ಗಣೇಶ ನಗರ, ಭಾಗ್ಯವಂತಿ ನಗರ, ದೇವಾ ನಗರ, ತಿಲಕ್ಕ ನಗರ, ಬನಶಂಕರಿ ನಗರ, ಹರಿ ನಗರ, ಗಾಬರೆ ಲೇಔಟ್, ಜೆಮಶೆಟ್ಟಿ ನಗರ, ಕೃಷ್ಣ ನಗರ, ತಾರಫೈಲ್, ಉದಯ ನಗರ, ಎನ್‍ಜಿಓ ಕಾಲೋನಿ, ಜೇವರ್ಗಿ ಕಾಲೋನಿ, ಮಾಕಾ ಲೇಔಟ್, ಸಂತೋಷ ಕಾಲೋನಿ, ಪಿಡಬ್ಲ್ಯೂಡಿ ಕಾಲೋನಿ, ಬ್ಯಾಂಕ್ ಕಾಲೋನಿ, ಬಾಲಾಜಿ ನಗರ, ರೆಹಮತ್ ನಗರ, ಸಂಪಿಗೆ ನಗರ, ಬುದ್ಧ ನಗರ, ರೇವಣಸಿದ್ದೇಶ್ವರ ಕಾಲೋನಿ, ಸಾಯಿ ನಗರ, ಓಜಾ ಲೇಔಟ್, ಸ್ವಾಮಿ ವಿವೇಕಾನಂದ ನಗರ, ಪ್ರಗತಿ ಕಾಲೋನಿ, ಸಿಐಬಿ ಕಾಲೋನಿ, ಶಕ್ತಿ ನಗರ, ಸ್ಟೇಷನ್ ಬಜಾರ, ಐವಾನ್ ಶಾಹಿ, ಯತ್ತೀಮ್‍ಖಾನಾ ಶಾಂತಿ ನಗರ, ವಿಠ್ಠಲ ನಗರ, ಖುಬಾ ಪ್ಲಾಟ, ಮಿಜಬಾ ನಗರ, ಅಜಮಿರ್ ಕಾಲೋನಿ, ಕರೀಂನಗರ, ಗಾಲಿಫ್ ಕಾಲೋನಿ, ಮಹಮ್ಮದ ಚೌಕ್, ಖಾದಿಲ್ ಚೌಕ್, ಶಿವನಗರ, ಸಿದ್ರಾಮೇಶ್ವರ ಕಾಲೋನಿ, ನಬಿ ಕಾಲೋನಿ, ಶೇಖ ರೋಜಾ, ಕೈಲಾಸ ನಗರ, ಜಿ.ಆರ್ ನಗರ, ಕಸ್ತೂರಿ ನಗರ, ಆಶ್ರಯ ಕಾಲೋನಿ, ಪೂಜಾ ಕಾಲೋನಿ, ಜಾಗೃತಿ ಕಾಲೋನಿ, ಓಂ ನಗರ, ಜಂ ಜಂ ಕಾಲೋನಿ, ಜುಬೇರ್ ಕಾಲೋನಿ, ಆಜಾದಪೂರ ಕಾಲೋನಿ, ನಾಯ್ಡು ಕಾಲೋನಿ ಹಾಗೂ ಮಿನಿ ಅಮ್ಮಲವಾಡಿ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಗದಗ | ಭೀಷ್ಮ ಕೆರೆಯಲ್ಲಿ ಮೀನುಗಳ ಮಾರಣಹೋಮ; ವಿಷ ಬೆರೆತ ಅನುಮಾನ

