ಬೆಂಗಳೂರು: ಜಲಾಶಯಕ್ಕೆ ಒಳಹರಿವು ಬಂದಿರುವುದರಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ (Krishna Upper Bank Project) ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್‌ಬಿ ತಿಮ್ಮಾಪೂರ (RB Timmapur) ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಚಿವರು, ಜಲಾಶಯಕ್ಕೆ ಒಳ ಹರಿವು ಬಂದಿರುವುದರಿಂದ ಚಾಲು-ಬಂದ್ ಪದ್ದತಿಯನ್ನು ಪರಿಷ್ಕರಿಸಿ 14 ದಿನ ನೀರು ಚಾಲು ಹಾಗೂ 10 ದಿನದ ಬದಲಿಗೆ 8 ದಿನ ಮಾತ್ರ ಬಂದ್ ಪದ್ದತಿಯನ್ನು ಅನುಸರಿಸಿ ಅಕ್ಟೋಬರ್ 17ರ ಬದಲಿಗೆ ಅಕ್ಟೋಬರ್ 14ನೇ ತಾರೀಖಿನಿಂದಲೇ ನೀರು ಚಾಲು ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೇ ಮುಂಗಾರು ಹಂಗಾಮಿಗೆ ನವೆಂಬರ್ 23 ರವರೆಗೂ ನೀರು ಹರಿಸಲು ಕೈಗೊಂಡಿದ್ದ ನಿರ್ಣಯದ ಬದಲಾಗಿ ಡಿಸೆಂಬರ್ 10 ರವರೆಗೂ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಳೇ ವೈಷಮ್ಯಕ್ಕೆ 9 ಎಕರೆ ಹತ್ತಿ ಬೆಳೆ ನಾಶ – ಲಕ್ಷಾಂತರ ರೂ. ಬೆಳೆ ಕಳೆದುಕೊಂಡ ರೈತರು
ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿಗಾಗಿ ನೀರು ಹರಿಸುವುದನ್ನು ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿ ರೈತರ ಹಿತಕಾಪಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಸುಮಾರು 6 ಲಕ್ಷ ಬೆಕ್ ಪ್ರದೇಶದ ರೈತರಿಗೆ ಅನುಕೂಲವಾಗಲಿದೆ ಎಂದು ಸಚಿವ ಆರ್‌ಬಿ ತಿಮ್ಮಾಪೂರ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಚಾಮುಂಡೇಶ್ವರಿ ಬಳಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾ ವಿರೋಧ ಮಾಡಬೇಕು: ಪ್ರತಾಪ್ ಸಿಂಹ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]