ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು (Waqf Amendment Bill) ಸಂಸತ್‌ನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಬಣ್ಣಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ಮಸೂದೆ ಅಂಗೀಕಾರಗೊಂಡಿರುವುದು ಸಾಮಾಜಿಕ-ಆರ್ಥಿಕ ನ್ಯಾಯ, ಪಾರದರ್ಶಕತೆ ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆಗಾಗಿ ನಮ್ಮ ಸಾಮೂಹಿಕ ಅನ್ವೇಷಣೆಯಲ್ಲಿ ಒಂದು ಮಹತ್ವದ ಕ್ಷಣವಾಗಿದೆ. ಇದು ದೀರ್ಘಕಾಲದಿಂದ ಅವಕಾಶ ವಂಚಿತರಾಗಿರುವ ಜನರಿಗೆ ಸಹಕಾರಿಯಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ʼರಾಜ್ಯʼದಲ್ಲೂ ಗೆದ್ದ ಮೋದಿ ಸರ್ಕಾರ – ವಕ್ಫ್ ಬಿಲ್ ಜಾರಿಗೆ ಇನ್ನೊಂದೇ ಹೆಜ್ಜೆ ಮಾತ್ರ ಬಾಕಿ
The passage of the Waqf (Amendment) Bill and the Mussalman Wakf (Repeal) Bill by both Houses of Parliament marks a watershed moment in our collective quest for socio-economic justice, transparency and inclusive growth. This will particularly help those who have long remained on…
— Narendra Modi (@narendramodi) April 4, 2025
ದಶಕಗಳಿಂದ ವಕ್ಫ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಕೊರತೆ ಇತ್ತು. ಇದರಿಂದ ಮುಸ್ಲಿಂ ಮಹಿಳೆಯರು, ಬಡ ಮುಸ್ಲಿಮರು, ಪಸ್ಮಾಂಡ ಮುಸ್ಲಿಮರ ಹಿತಾಸಕ್ತಿಗಳಿಗೆ ಧಕ್ಕೆಯಾಗಿತ್ತು. ಸಂಸತ್ತು ಅಂಗೀಕರಿಸಿದ ಮಸೂದೆ ಪಾರದರ್ಶಕತೆಯನ್ನು ಹೆಚ್ಚಿಸುತ್ತವೆ ಮತ್ತು ಜನರ ಹಕ್ಕುಗಳನ್ನು ರಕ್ಷಿಸುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾವು ಆಧುನಿಕ ಮತ್ತು ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಯುಗವನ್ನು ಪ್ರವೇಶಿಸುತ್ತೇವೆ. ಪ್ರತಿಯೊಬ್ಬ ನಾಗರಿಕನ ಘನತೆಗೆ ಆದ್ಯತೆ ನೀಡಲು ನಾವು ಬದ್ಧರಾಗಿದ್ದೇವೆ. ಬಲಿಷ್ಠ, ಅಂತರ್ಗತ, ಸಹಾನುಭೂತಿ ಭಾರತ ನಿರ್ಮಾಣಕ್ಕೆ ಮಸೂದೆ ಪೂರಕವಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆಗೆ ಬೆಂಬಲ – ಜೆಡಿಯುನಲ್ಲಿ ಭಿನ್ನಮತ ಸ್ಫೋಟ – ಇಬ್ಬರು ಮುಸ್ಲಿಂ ಶಾಸಕರು ರಾಜೀನಾಮೆ