– ವಯನಾಡು ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಭರವಸೆ
ಬೆಂಗಳೂರು/ ಚಾಮರಾಜನಗರ: ಕೇರಳ ಸರ್ಕಾರ (Kerala Government), ಕಾಂಗ್ರೆಸ್ ಹೈಕಮಾಂಡ್ (Congress High Command) ಲಾಬಿಗೆ ಮಣಿದು ಬಂಡೀಪುರ (Bandipur) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡುತ್ತಾ ಎಂಬ ಪ್ರಶ್ನೆ ಎದ್ದಿದೆ.
ಹೌದು. ಕಳೆದ ವಯನಾಡು ಲೋಕಸಭಾ ಚುನಾವಣೆಯಲ್ಲಿ (Wayanad By Election ) ರಾಹುಲ್ ಗಾಂಧಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡುವ ಬಗ್ಗೆ ಭರವಸೆ ನೀಡಿದ್ದರು. ಈಗ ಪ್ರಿಯಾಂಕಾ ಗಾಂಧಿ ಈ ಭರವಸೆ ನೀಡಿದ್ದಾರೆ. ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಅನುಮತಿ ನೀಡುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಪ್ರತಿಕ್ರಿಯಿಸಿದ್ದಾರೆ.
Advertisement
ಈ ವಿಚಾರದ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪ್ರತಿನಿಧಿಗಳು ನನ್ನ ಬಳಿ ಬಂದು ಮಾತಾಡಿದ್ದಾರೆ. ಎರಡು ಸರ್ಕಾರಗಳನ್ನ ಕರೆಸಿ ಕುಳಿತುಕೊಂಡು ಮಾತುಕತೆ ಮಾಡುತ್ತೇವೆ. ರಾಜ್ಯದ ಹಿತವನ್ನು ಕಾಪಾಡಿಕೊಂಡು, ಜನರ ಹಿತವನ್ನು ಕಾಪಾಡಿಕೊಂಡು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
Advertisement
Advertisement
ಯದುವೀರ್ ವಿರೋಧ:
ವಯನಾಡ್ ಉಪಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ನಮ್ಮ ರಾಜ್ಯದ ನೈಸರ್ಗಿಕ ಸಂಪತ್ತಾದ ಬಂಡಿಪುರ ಅಭಯಾರಣ್ಯದ ಮಧ್ಯೆ ಹಾದು ಹೋಗುವ ಎನ್‌ಎಚ್ 766 ರ ರಾತ್ರಿ ಪ್ರಯಾಣ ನಿಷೇಧವನ್ನು ತೆಗೆದುಹಾಕುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರು ಇತ್ತೀಚೆಗೆ ಕೇರಳದಲ್ಲಿ ನೀಡಿರುವ ಹೇಳಿಕೆಯು ಬೇಜವಾಬ್ದಾರಿ ಮತ್ತು ಖಂಡನೀಯವಾಗಿದೆ. ಇದನ್ನೂ ಓದಿ: ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿ ಕೊಡಿ: ಸರ್ಕಾರಕ್ಕೆ ಮುಸ್ಲಿಂ ಸಮುದಾಯ ಬೇಡಿಕೆ
Advertisement
ಬಂಡೀಪುರದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ವೈವಿಧ್ಯತೆಯು ಅದರೊಳಗೆ ಅಭಿವೃದ್ಧಿ ಹೊಂದುತ್ತಿರುವ ವಿವಿಧ ಪ್ರಭೇದಗಳ ವನ್ಯಜೀವಿಗಳಿಗೆ ಸೇರಿದ ಸಂಪತ್ತು. ಈ ಅಭಯಾರಣ್ಯದ ಮೂಲಕ ರಾತ್ರಿ ಪ್ರಯಾಣಕ್ಕೆ ಅವಕಾಶ ನೀಡುವುದರಿಂದ ವನ್ಯಜೀವಿಗಳಿಗೆ ಅಪಾಯವಿದೆ ಮತ್ತು ಮಾನವ-ವನ್ಯಜೀವಿ ಸಂಘರ್ಷಕ್ಕೆ ಇದು ಎಡೆ ಮಾಡಿಕೊಡುತ್ತದೆ. ಬೇರೆ ರಾಜ್ಯದಲ್ಲಿನ ಚುನಾವಣಾ ಲಾಭಕ್ಕಾಗಿ ಕರ್ನಾಟಕದ ವನ್ಯಜೀವಿಗಳಿಗೆ ಧಕ್ಕೆ ತರುವುದು ಸಮಂಜಸವಲ್ಲ. ನಮ್ಮ ಸರ್ಕಾರವು ಈ ಪರಿಸರ ವಲಯಗಳ ರಕ್ಷಣೆಯ ನಿಟ್ಟಿನಲ್ಲಿ ಯಾವುದೆ ರಾಜಿ ಮಾಡಿಕೊಳ್ಳದೆ ರಕ್ಷಿಸಬೇಕಾಗಿದೆ ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಪೋಸ್ಟ್ ಮಾಡಿದ್ದಾರೆ.
ವಯನಾಡ್ ಉಪಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ನಮ್ಮ ರಾಜ್ಯದ ನೈಸರ್ಗಿಕ ಸಂಪತ್ತಾದ ಬಂಡಿಪುರ ಅಭಯಾರಣ್ಯದ ಮಧ್ಯೆ ಹಾದು ಹೋಗುವ ಎನ್‌ಎಚ್ 766 ರ ರಾತ್ರಿ ಪ್ರಯಾಣ ನಿಷೇಧವನ್ನು ತೆಗೆದುಹಾಕುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇತ್ತೀಚೆಗೆ ಕೇರಳದಲ್ಲಿ ನೀಡಿರುವ ಹೇಳಿಕೆಯು ಬೇಜವಾಬ್ದಾರಿ ಮತ್ತು ಖಂಡನೀಯವಾಗಿದೆ.
ಬಂಡೀಪುರದ… pic.twitter.com/GPjvIwP44t
— Yaduveer Wadiyar (@yaduveerwadiyar) November 10, 2024
ಏನಿದು ಪ್ರಕರಣ?
ಹುಲಿ, ಆನೆ, ಕಾಡೆಮ್ಮೆ ಸೇರಿದಂತೆ ಅಳಿವಿನಂಚಿನಲ್ಲಿರುವ ಪ್ರಾಣಿಗಳು ಅಪಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ 2009ರಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 212 ಮತ್ತು 69 ರಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಚಾಮಾರಾಜನಗರ ಜಿಲ್ಲಾ ಆಡಳಿತ ಆದೇಶ ಹೊರಡಿಸಿತ್ತು. ವಾಹನಗಳ ಸಂಚಾರ ನಿಷೇಧವನ್ನು ರದ್ದುಪಡಿಸದಂತೆ ಕರ್ನಾಟಕ ಹೈಕೋರ್ಟ್ 2010ರಲ್ಲಿ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೇರಳ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ನಡೆಯುತ್ತಿದೆ.
ಕೇರಳ ಸರ್ಕಾರ ಈ ಹಿಂದೆ ಸಾಕಷ್ಟು ಬಾರಿ ನಿಷೇಧ ತೆರವುಗೊಳಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿಕೊಂಡಿತ್ತು. ಕೇರಳದ ಲಾಬಿಗೆ ರಾಜ್ಯ ಸರ್ಕಾರ ಮಣಿದಿರಲಿಲ್ಲ. ಸಿದ್ದರಾಮಯ್ಯ ಸರ್ಕಾರ ಇದ್ದಾಗಲೂ ವಿರೋಧ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಜೆಡಿಎಸ್ ಸರ್ಕಾರ ಇದ್ದಾಗ ಬಂಡೀಪುರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಚಿಂತನೆ ನಡೆದಿತ್ತು. ಇದಕ್ಕೆ ಪರಿಸರವಾದಿಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
ರಾತ್ರಿ ಸಂಚಾರ ನಿಷೇಧಕ್ಕೂ ಮುನ್ನ ಅಂದ್ರೆ 2004-09ರ ಅವಧಿಯಲ್ಲಿ ಬಂಡಿಪುರ ಅರಣ್ಯ ಪ್ರದೇಶದಲ್ಲಿ 86 ಪ್ರಾಣಿಗಳು ಅಪಘಾತಕ್ಕೆ ಬಲಿಯಾಗಿತ್ತು. ರಾತ್ರಿ ಸಂಚಾರ ನಿಷೇಧ ಬಳಿಕ 2010-18ರ ಅವಧಿಯಲ್ಲಿ 17 ಪ್ರಾಣಿ ಮೃತಪಟ್ಟಿದ್ದವು. ಒಟ್ಟಿನಲ್ಲಿ ರಾತ್ರಿ ವಾಹನ ಸಂಚಾರ ನಿಷೇಧದ ಬಳಿಕ ಅಪಘಾತದಲ್ಲಿ ಸತ್ತ ಪ್ರಾಣಿಗಳ ಸಂಖ್ಯೆ ಇಳಿಕೆಯಾಗಿತ್ತು. ಕೇರಳ ಸರ್ಕಾರದ ಬೇಡಿಕೆಯ ಹಿಂದೆ ಟಿಂಬರ್ ಮಾಫಿಯಾದ ಕೈವಾಡವಿದೆ ಎಂಬ ಆರೋಪವೂ ಕೇಳಿ ಬಂದಿದೆ.