ವಯನಾಡ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ (Wayanadu) ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕಿಳಿಯಲಿದ್ದಾರೆ.
ಪ್ರಿಯಾಂಕಾ ಗಾಂಧಿ ಉಮೇದುವಾರಿಕೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ವಯನಾಡಿನ ಜನರು ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಗಿಂತ ಉತ್ತಮ ಪ್ರತಿನಿಧಿಯನ್ನು ನಾನು ಊಹಿಸಲು ಸಾಧ್ಯವಿಲ್ಲ. ವಯನಾಡಿನ ಅಗತ್ಯತೆಗಳು ಮತ್ತು ಸಂಸತ್ತಿನಲ್ಲಿ ಪ್ರಬಲ ಧ್ವನಿಯಾಗಲಿದ್ದು, ಚಾಂಪಿಯನ್ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.ಇದನ್ನೂ ಓದಿ: ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
Advertisement
Advertisement
ಉತ್ತರ ಪ್ರದೇಶದ (UttaraPradesh) ರಾಯ್ ಬರೇಲಿ (Raebareli) ಮತ್ತು ಕೇರಳದ (Kerala) ವಯನಾಡ್‌ನಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ತೆರವು ಮಾಡಿದ್ದರು. ಈ ಹಿನ್ನಲೆ ವಯನಾಡ್‌ನಲ್ಲಿ ಉಪ ಚುನಾವಣೆ ನಡೆಯುತ್ತಿದೆ.
Advertisement
ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು. ನಾಮಪತ್ರದ ಬಳಿಕ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಪ್ರಿಯಾಂಕಾ ಗಾಂಧಿ ಬೃಹತ್ ರೋಡ್ ಶೋ ನಡೆಸಿದರು.
Advertisement
ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿ ತನ್ನ ಮಹಿಳಾ ಮೊರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನವ್ಯಾ ಹರಿದಾಸ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಸಿಪಿಐನಿಂದ ಸತ್ಯೇನ್ ಮೊಕೇರಿ ಅವರು ಅಖಾಡದಲ್ಲಿದ್ದು, ತ್ರಿಕೋನ ಸ್ಪರ್ಧೆ ಏರ್ಪಡಲಿದೆ.
ಪ್ರಿಯಾಂಕಾ ಗಾಂಧಿ ಸ್ಪರ್ಧೆ ಬಗ್ಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್, ನನ್ನ ಪ್ರತಿಸ್ಪರ್ಧಿ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಕಾಂಗ್ರೆಸ್ ಪರ ಕಠಿಣ ಸವಾಲು ಎದುರಿಸಲಿದ್ದಾರೆ. ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ರಾಹುಲ್ ಗಾಂಧಿ ವಯನಾಡ್ ಕ್ಷೇತ್ರವನ್ನು ತೊರೆದರು. ವಯನಾಡ್ ಜನರು ಭೂಕುಸಿತದಿಂದ ತತ್ತರಿಸಿದಾಗ ಈ ಸಮಸ್ಯೆಗಳನ್ನು ಪ್ರಸ್ತಾಪಿಸಲು ಸಂಸತ್ತಿನಲ್ಲಿ ಅವರಿಗೆ ಯಾವುದೇ ಪ್ರತಿನಿಧಿ ಇರಲಿಲ್ಲ ಎಂದು ಹೇಳಿದರು.ಇದನ್ನೂ ಓದಿ: ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಏನಾಗಿರಲಿಲ್ಲ: ಆರ್ ಅಶೋಕ್