– ಸ್ಥಳಕ್ಕೆ ಭೇಟಿ ನೀಡಿದ ರಾಹುಲ್, ಪ್ರಿಯಾಂಕಾ
– ಪ್ರತಿಕೂಲ ಹವಾಮಾನದ ಮಧ್ಯೆಯೂ ರಕ್ಷಣಾ ಕಾರ್ಯ ಚುರುಕು
ವಯನಾಡು: ಪ್ರವಾಸಿಗರ ಸ್ವರ್ಗ ಕೇರಳದ ವಯನಾಡು (Wayanad Landslide) ಈಗ ಮರಣ ದಿಬ್ಬವಾಗಿದೆ. ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಈವರೆಗೂ 300ಕ್ಕೂ ಹೆಚ್ಚು ಮಂದಿ ಬಲಿ ಆಗಿದ್ದಾರೆ. 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಇನ್ನೂ 240 ಮಂದಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ. ಅವರ ಪತ್ತೆಗೆ ಪ್ರತಿಕೂಲ ಹವಾಮಾನದ ನಡುವೆಯೂ ಸೇನೆ ಮತ್ತು ಎನ್‌ಡಿಆರ್‌ಎಫ್ (NDRF) ಅವಿರತವಾಗಿ ಶ್ರಮಿಸುತ್ತಿವೆ.
Advertisement
10ಕ್ಕೂ ಹೆಚ್ಚು ಜೆಸಿಬಿ ಬಳಸಿ ಕೆಸರು ಮಣ್ಣು, ಕಲ್ಲುಗಳನ್ನು ತೆರವು ಮಾಡಲಾಗುತ್ತಿದೆ. ಶ್ವಾನಗಳನ್ನು (Dog) ಬಳಸಿ ಶೋಧ ಕಾರ್ಯ ನಡೆಯುತ್ತಿದೆ. ಜೆಸಿಬಿಯನ್ನು ನದಿಗೂ ಇಳಿಸಲಾಗಿದೆ. ಚಲಿಯಾರ್ ನದಿ ಪ್ರತಾಪ ಸ್ವಲ್ಪಮಟ್ಟಿಗೆ ಕಡಿಮೆ ಆಗಿದ್ದು ಮಂಗಳವಾರ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಮತ್ತೆ ಬಳಕೆಗೆ ಲಭ್ಯವಾಗಿದೆ. ಇದನ್ನೂ ಓದಿ: Wayanad Landslides – ಕಂಬನಿ… ಖಾಲಿಯಾಗಿದೆ…!
Advertisement
Advertisement
ರಕ್ಷಣಾ ತಂಡಗಳು ರಾತ್ರೋರಾತ್ರಿ ನದಿಗೆ ಅಡ್ಡಲಾಗಿ 2 ಕಬ್ಬಿಣದ ಸೇತುವೆಗಳನ್ನು ತಾತ್ಕಾಲಿಕವಾಗಿ ನಿರ್ಮಿಸಿದೆ. ಇದನ್ನು ಬಳಸಿ ಜನರನ್ನುಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಈ ಕಾರ್ಯಾಚರಣೆ ಸದ್ಯಕ್ಕೆ ಮುಗಿಯುವುದು ಅನುಮಾನವಾಗಿದೆ. ಕನಿಷ್ಠ 15 ದಿನ ಈ ಕಾರ್ಯಾಚರಣೆ ನಡೆಯಬಹುದು ಎಂದು ಹೇಳಲಾಗುತ್ತಿದೆ.
Advertisement
ದುರಂತ ನಡೆದ ಸ್ಥಳಕ್ಕೆ ಸಿಎಂ ಪಿಣರಾಯ್ ವಿಜಯನ್ (Pinarayi Vijayan), ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ (Priyanka Gandhi) ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: Wayanad Landslide | ದಯವಿಟ್ಟು ಅಳಿಯನ ಮೃತ ದೇಹ ಹುಡುಕಿ, ಕೊನೆ ಬಾರಿ ನೋಡ್ತಿವಿ!
ಆಸ್ಪತ್ರೆಗಳಲ್ಲಿ ನೂರಾರು ಶವಗಳಿದ್ದು, ಸಂಬಂಧಿಕರು ಕಣ್ಣೀರಿಡುತ್ತಲೇ ತಮ್ಮವರ ಶವಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಒಬ್ಬಾಕೆಯಂತೂ ತಮ್ಮವರ ಶವ ನೋಡಿ ಕುಸಿದುಬಿದ್ದಿದ್ದಾರೆ ನೂರಾರು ಸಾವುಗಳು ಉಂಟಾಗಿರುವ ಹಿನ್ನೆಲೆಯಲ್ಲಿ ಹೆಚ್1ಎನ್1 ಸೇರಿ ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ. ಹೀಗಾಗಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ.