ನವದೆಹಲಿ: ವಯನಾಡ್ (Wayanad) ದುರಂತ ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prhlad Joshi) ವಿಷಾದ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿ, ವಯನಾಡ್ ಇಂದು ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದು, ಇಲ್ಲಿನವರ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.
ಈ ದುರಂತ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಅಲ್ಲಿಯ ನಿವಾಸಿಗಳ ರಕ್ಷಣಾ ಕಾರ್ಯಕ್ಕೆ ಕೇಂದ್ರ ಅಗತ್ಯ ನೆರವು ಕಲ್ಪಿಸಲಿದೆ ಎಂದರು.
ವಯನಾಡಿನಲ್ಲಿ ಜನಜೀವನವನ್ನು ಸಹಜ ಸ್ಥಿತಿಗೆ ತರುವಲ್ಲಿ ಕೇಂದ್ರ ಸಂಪೂರ್ಣ ಸಹಕಾರ, ಬೆಂಬಲ ನೀಡಲು ಬದ್ಧವಾಗಿದೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.