Wayanad Landslides: ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

Public TV
1 Min Read
Siddaramaiah 14

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ (Santosh Lad) ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶದಲ್ಲಿ (Wayanad Landslides) ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

Wayanad Landslide Why is the rescue operation difficult Chooralmala Mundakkai Meppadi News 1

ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ. ಇದನ್ನೂ ಓದಿ: Wayanad Landslides: ನಾಲ್ವರು ಕನ್ನಡಿಗರು ದುರ್ಮರಣ – ಬೆಂಗಳೂರಿನ ಇಬ್ಬರು ಪ್ರವಾಸಿಗರು ಕಣ್ಮರೆ!

Wayanad Landslide Houses washed away town partially swept off Chooralmala Mundakkai Meppadi News

ಕೇರಳದಲ್ಲಿ ಕನ್ನಡಿಗರ ರಕ್ಷಣೆಗೆ ಈಗಾಗಲೇ ಬೆಂಗಳೂರಿನಿಂದ ಎರಡು ತಂಡ ಹೊರಟಿದೆ. ಅಲ್ಲದೇ ಮಡಿಕೇರಿಯಿಂದ 20 ಜನರ ತಂಡ ಸ್ವಯಂಪ್ರೇರಿತವಾಗಿ ರಕ್ಷಣಾಕಾರ್ಯದಲ್ಲಿ ತೊಡಗಿಕೊಂಡಿದೆ. ಈ ನಡುವೆ ಸಚಿವ ಸಂತೋಷ್‌ ಲಾಡ್‌ ಅವರೂ ಸಹ ಹೊರಟಿದ್ದಾರೆ. ಅಲ್ಲದೇ ತಮಿಳುನಾಡು ಸರ್ಕಾರದಿಂದಲೂ ರಕ್ಷಣಾ ಕಾರ್ಯಕ್ಕೆ 5 ಕೋಟಿ ರೂ. ತುರ್ತು ನೆರವು ಘೋಷಿಸಲಾಗಿದೆ.

ಕನ್ನಡಿಗರ ಸಾವಿನ ಸಂಖ್ಯೆ 7ಕ್ಕೆ ಏರಿಕೆ:
ವಯನಾಡಿನಲ್ಲಿ ಸಂಭವಿಸಿದ ಘೋರ ದುರಂತಕ್ಕೆ ಸಿಕ್ಕಿ ಮೃತಪಟ್ಟಿರುವ ಕನ್ನಡಿಗರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಪೈಕಿ ಸುಮಾರು 8 ಮಂದಿ ಕಣ್ಮರೆಯಾಗಿದ್ದಾರೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಇದನ್ನೂ ಓದಿ: Wayanad Landslide : ರಕ್ಷಣಾ ಕಾರ್ಯಾಚರಣೆ ಯಾಕೆ ಕಷ್ಟವಾಗುತ್ತಿದೆ? 

Share This Article