Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆ.ಸಿ.ಜನರಲ್‍ನಲ್ಲೂ ತಾಯಿ-ಶಿಶು ಆಸ್ಪತ್ರೆ ‘ವಾಣಿ ವಿಲಾಸ’ ಮಾದರಿಯಲ್ಲಿ ನಿರ್ಮಾಣ: ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆ.ಸಿ.ಜನರಲ್‍ನಲ್ಲೂ ತಾಯಿ-ಶಿಶು ಆಸ್ಪತ್ರೆ ‘ವಾಣಿ ವಿಲಾಸ’ ಮಾದರಿಯಲ್ಲಿ ನಿರ್ಮಾಣ: ಕೆ.ಸುಧಾಕರ್

Bengaluru City

ಕೆ.ಸಿ.ಜನರಲ್‍ನಲ್ಲೂ ತಾಯಿ-ಶಿಶು ಆಸ್ಪತ್ರೆ ‘ವಾಣಿ ವಿಲಾಸ’ ಮಾದರಿಯಲ್ಲಿ ನಿರ್ಮಾಣ: ಕೆ.ಸುಧಾಕರ್

Public TV
Last updated: April 20, 2022 2:57 pm
Public TV
Share
2 Min Read
sudhakar 2
SHARE

ಬೆಂಗಳೂರು: ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ‘ವಾಣಿ ವಿಲಾಸ’ ಮಾದರಿಯಲ್ಲೇ ತಾಯಿ-ಶಿಶು ಆಸ್ಪತ್ರೆಯನ್ನು ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಿರ್ಮಾಣ್ ಹಾಗೂ ಓಪನ್ ಟೆಕ್ಸ್ಟ್ ನೆರವಿನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ ಹಾಗೂ ಹೊಸ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು. ಈ ವೇಳೆ ಅವರು, ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ತಾಯಿ-ಶಿಶು ಕೇಂದ್ರ ನಿರ್ಮಿಸಲು ಉದ್ದೇಶಿಸಲಾಗಿದೆ. ಇದನ್ನು ‘ವಾಣಿ ವಿಲಾಸ’ ಮಾದರಿಯಲ್ಲಿ ನಿರ್ಮಿಸಲಾಗುವುದು. ಈಗಾಗಲೇ ಆಯವ್ಯಯದಲ್ಲಿ ಘೋಷಿಸಿದಂತೆ, ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಕನಿಷ್ಠ 500 ಹಾಸಿಗೆ ಸಾಮಥ್ರ್ಯ ಇರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗುತ್ತದೆ. ಈ ವರ್ಷದಲ್ಲೇ ಎಲ್ಲ ಪ್ರಸ್ತಾವಗಳು ಬರಲಿದ್ದು, ಜಾಗಗಳನ್ನು ಗುರುತಿಸಲಾಗುವುದು. ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಲಿದೆ ಎಂದರು. ಇದನ್ನೂ ಓದಿ: ನಾಲ್ಕನೇ ಅಲೆ ಬಂದಿಲ್ಲ, ಪ್ರಕರಣ ಹೆಚ್ಚಳದಿಂದ ಮುನ್ನೆಚ್ಚರಿಕೆ ಅಗತ್ಯ: ಸುಧಾಕರ್

KC GENERAL HOSPITAL

ಖಾಸಗಿ ಸಂಸ್ಥೆಗಳು ಕೆ.ಸಿ.ಜನರಲ್‍ನಲ್ಲಿ 10 ಹಾಸಿಗೆಗಳ ಐಸಿಯು ವ್ಯವಸ್ಥೆಯನ್ನು ಮಾಡಿಕೊಟ್ಟಿವೆ. ಜೊತೆಗೆ ಅದಕ್ಕೆ ಬೇಕಿರುವ ಉಪರಣಗಳನ್ನೂ ನೀಡಲಾಗಿದೆ. 5 ವರ್ಷದೊಳಗಿನ ಮಕ್ಕಳು ನ್ಯುಮೋನಿಯಾದಿಂದ ಸಾವಿಗೀಡಾಗುವುದನ್ನು ತಪ್ಪಿಸಲು ರಾಜ್ಯಮಟ್ಟದ ಅರಿವು ಕಾರ್ಯಕ್ರಮ ಹಾಗೂ ಆಶಾ ಕಾರ್ಯಕರ್ತೆಯರು, ಇತರೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನೀಡಲಾಗುತ್ತಿದೆ. ಇದು ಶ್ಲಾಘನೀಯವಾಗಿದೆ ಎಂದು ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬೇಟಿ ಬಚಾವೊ, ಬೇಟಿ ಪಡಾವೊ(ಹೆಣ್ಣು ಮಕ್ಕಳನ್ನು ಉಳಿಸಿ, ಓದಿಸಿ) ಎಂದು ಘೋಷಿಸಿ ಹೆಣ್ಣುಮಕ್ಕಳ ರಕ್ಷಣೆಗೆ ಒತ್ತು ನೀಡಿದ್ದಾರೆ. ಇದೇ ರೀತಿ ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುವುದನ್ನು ತಡೆಯಲು ಕಠಿಣ ಕಾನೂನು ಜಾರಿಯಲ್ಲಿದೆ. ಹೊಸ ಎನ್‍ಟಿಪಿ ಕಾನೂನಿನಲ್ಲಿ, ಆಪತ್ತು ಇರುವ ತಾಯಂದಿರು ಹಾಗೂ ಆರೋಗ್ಯಕರವಾಗಿ ಬೆಳೆಯದ ಭ್ರೂಣಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಗರ್ಭಪಾತ ಮಾಡಲು ಅವಕಾಶವಿದೆ. ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

baby 2 1

ದೇಶದಲ್ಲಿ ಒಂದೂವರೆ ಲಕ್ಷದಷ್ಟು ಮಕ್ಕಳು 5 ವರ್ಷದೊಳಗೆ ನ್ಯುಮೋನಿಯಾಗೆ ತುತ್ತಾಗುತ್ತಿದ್ದಾರೆ. ರಾಜ್ಯದಲ್ಲಿ 1,000 ಶಿಶು ಜನನದಲ್ಲಿ 28 ಸಾವುಗಳು ನ್ಯುಮೋನಿಯಾದಿಂದ ಸಂಭವಿಸುತ್ತಿವೆ. ಇದನ್ನು ನಾಲ್ಕು, ಐದಕ್ಕೆ ಇಳಿಸಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಗುರಿ ನೀಡಿದೆ. ಇದಕ್ಕಾಗಿ ಹೆಚ್ಚು ಅರಿವು ತರುವ ಕಾರ್ಯಕ್ರಮ ನಡೆಯಬೇಕಿದೆ. ಮುನ್ನೆಚ್ಚರಿಕೆಯಿಂದಲೇ ಅನೇಕ ರೋಗಗಳನ್ನು ತಡೆಗಟ್ಟಲು ಸಾಧ್ಯವಿದೆ. ಮಕ್ಕಳ ಆರೋಗ್ಯ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ಎಂದು ಕರೆಕೊಟ್ಟರು. ಇದನ್ನೂ ಓದಿ:  ಕೋವಿಡ್ ಉಲ್ಬಣದಿಂದ ದೆಹಲಿಯಲ್ಲಿ ಶಾಲೆಗಳು ಬಂದ್? – ತಜ್ಞರ ಸಮಿತಿಯ ಸಲಹೆಗಳೇನು?

ಕೆ.ಸಿ.ಜನರಲ್‍ಗೆ ಉತ್ತಮ ಬದಲಾವಣೆ ಬೇಕಿದೆ. ಕೆ.ಸಿ.ಜನರಲ್ ಆಸ್ಪತ್ರೆ ನಗರದ ಹೃದಯಭಾಗದಲ್ಲಿದ್ದು, ಉತ್ತಮ ಆಸ್ಪತ್ರೆಯಾಗಿದೆ. ಇಲ್ಲಿಗೆ ಬರುವ ರೋಗಿಗಳನ್ನು ಮನೆಯವರಂತೆ ಆರೈಕೆ ಮಾಡುವ ಅಗತ್ಯವಿದೆ. ಆದರೆ ಅಂತಹ ನಿರೀಕ್ಷಿತ ಬದಲಾವಣೆ ಈ ಆಸ್ಪತ್ರೆಯಲ್ಲಿ ಕಂಡುಬಂದಿಲ್ಲ. ಜಯದೇವ, ವಾಣಿ ವಿಲಾಸ ಮೊದಲಾದ ಆಸ್ಪತ್ರೆಗಳಲ್ಲಿ ಖಾಸಗಿಗಿಂತ ಹೆಚ್ಚು ಗುಣಮಟ್ಟದ ಸೇವೆ ದೊರೆಯುತ್ತಿದೆ. ಇದೇ ರೀತಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ಏಕೆ ಸೇವೆ ದೊರೆಯುತ್ತಿಲ್ಲವೆಂದು ಚಿಂತಿಸಬೇಕಿದೆ ಎಂದರು.

ಆಸ್ಪತ್ರೆಯ ಎಲ್ಲರೂ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕು. ಆಸ್ಪತ್ರೆಯ ಸಂಪೂರ್ಣ ವ್ಯವಸ್ಥೆಯನ್ನು ನಿರ್ವಹಣೆ ಮಾಡುವವರು ಉತ್ತಮವಾಗಿ ಕೆಲಸ ಮಾಡಬೇಕು. ಒಳ್ಳೆಯ ಸೇವೆ ನೀಡಿದರೆ ಜನರಿಗೆ ಒಳ್ಳೆಯದಾಗುತ್ತದೆ. ಇದರಿಂದ ಸರ್ಕಾರಕ್ಕೂ ಹೆಸರು ಬರುತ್ತದೆ ಎಂದು ಕಿವಿಮಾತು ಹೇಳಿದರು.

TAGGED:K Sudhakarkc general hospitalVani Vilasಕೆ.ಸಿ.ಜನರಲ್ ಆಸ್ಪತ್ರೆಕೆ.ಸುಧಾಕರ್ವಾಣಿ ವಿಲಾಸ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
7 minutes ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
17 minutes ago
silver worth crores of rupees looted after breaking through wall of MB Jewellers shop in Dasarahalli bengaluru
Bengaluru City

ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

Public TV
By Public TV
60 minutes ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
1 hour ago
West Bengal Election mamata banerjee late night high drama election commission says strong room not open
Latest

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Public TV
By Public TV
1 hour ago
Love
Latest

ನಿನಗಾಗಿ ಕಾಯ್ದಿರಿಸಿದ ಹೃದಯವಿದು ಅಂತ ನೀನ್ಯಾಕೆ ಹೇಳ್ತಿಲ್ಲ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?