– ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮೋದಿ ಕಾರಣ
ರಾಯಚೂರು: ಪ್ರಧಾನಿ ನರೇಂದ್ರ ಮೋದಿಯವರ ಸರ್ವಾಧಿಕಾರಿ ಧೋರಣೆ ಪ್ರಜಾಪ್ರಭುತ್ವದಲ್ಲಿ ಸರಿಯಲ್ಲ, ಫ್ಯಾಸಿಸಂ ರೀತಿಯಲ್ಲಿ ಹಿಟ್ಲರ್ ಮಾದರಿಯಲ್ಲಿ ದೇಶವನ್ನ ಆಳಲು ಹೊರಟಿದ್ದಾರೆ. ಇಂತವರಿಗೆ ಪಾಠ ಕಲಿಸಬೇಕಿದೆ ಅಂತ ರಾಯಚೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ್ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಬಿ.ವಿ.ನಾಯಕ್, ನರೇಂದ್ರ ಮೋದಿಯವರ ಸರ್ವಾಧಿಕಾರಿ ಧೋರಣೆ ಪ್ರಜಾಪ್ರಭುತ್ವದಲ್ಲಿ ಸರಿಯಲ್ಲ, ಭಯ ಉಂಟುಮಾಡುವ ರೀತಿಯಲ್ಲಿ ಮೋದಿ ಇದ್ದಾರೆ. ಹೀಗಾಗಿ ಬಹಳಷ್ಟು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂದರು. ನಿರಂತರ ಸಭೆಗಳನ್ನ ನಡೆಸಿರುವ ಬಿ.ವಿ.ನಾಯಕ್ ನಾಳೆ ಜಿಲ್ಲೆಯ ಪ್ರಮುಖ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಅಂತ ಹೇಳಿದ್ದಾರೆ.
ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಶರಣಯ್ಯ ಗುಡದಿನ್ನಿ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ದೊಡ್ಡಬಸಪ್ಪ ಗೌಡ, ಸಿರವಾರ ತಾಲೂಕು ಮುಖಂಡ ಬ್ರಿಜೇಶ್ ಪಟೇಲ್ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ನಾಳೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಬಿ.ವಿ.ನಾಯಕ್ ತಿಳಿಸಿದ್ದಾರೆ.
ಭಾನುವಾರ ಮಾನ್ವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಎನ್.ಎಸ್ ಬೋಸರಾಜು ಹಾಗೂ ಸಂಸದ ಬಿ.ವಿ ನಾಯಕ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv