ಬೆಳಗಾವಿ: ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷವಾದ ಕಾಂಗ್ರೆಸ್ ನಲ್ಲಿ ಇನ್ನು ಬಂಡಾಯ ಶಮನ ಆಗಿಲ್ಲ, ಅದನ್ನು ಶಮನಗೊಳಿಸುವ ಪ್ರಯತ್ನ ನಡೆಸಲಾಗಿದೆ ಎಂದು ಅರಣ್ಯ ಸಚಿವ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯ ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಇರುವುದು ನಿಜ. ಅದು ಇನ್ನು ಶಮನ ಆಗಿಲ್ಲ. ಎಷ್ಟು ಶಾಸಕರು ಬಂಡಾಯದ ಬಾವುಟ ಹಿಡಿದಿದ್ದಾರೆ ಎಂಬ ಬಗ್ಗೆ ನಿರ್ದಿಷ್ಟ ಮಾಹಿತಿ ಇಲ್ಲ. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮ ಪಕ್ಷದಲ್ಲಿ ಗೊಂದಲವಿದೆ ಅಷ್ಟೇ, ನಾವು ಅಲರ್ಟ್ ಇದ್ದೇವೆ. ರೆಸಾರ್ಟ್ ರಾಜಕಾರಣಕ್ಕೆ ಬಿಜೆಪಿಯಿಂದ ನಿರಂತರ ಪ್ರಯತ್ನ ನಡೆದಿದೆ ಎಂದರು.
ಇದೇ ವೇಳೆ ಕೇಂದ್ರ ಬಿಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಕಳೆದ 4 ವರ್ಷಗಳಲ್ಲಿ ಸರ್ಕಾರ ಘೋಷಣೆ ಮಾಡಿದ ಯಾವುದೇ ಯೋಜನೆ ಸಮರ್ಪಕವಾಗಿ ಜಾರಿ ಆಗಿಲ್ಲ. ಅಲ್ಲದೇ ಬಜೆಟ್‍ನಲ್ಲಿ ಯಾವುದೇ ವಿಶೇಷ ಯೋಜನೆ, ಘೋಷಣೆ ಇಲ್ಲ. ಇದರಿಂದ ಜನರಿಗೆ ನಿರಾಸೆ ಆಗಿದೆ. ದೇಶದ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಅಂಶಗಳಿಲ್ಲದೇ ಕೇವಲ ಚುನಾವಣಾ ಬಜೆಟ್ ಆಗಿದೆ ಅಷ್ಟೇ ಎಂದರು.
ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಜಾರಕಿಹೊಳಿ ನಮ್ಮ ಸಿಎಂ ಎಂದು ಅಭಿಮಾನಿಗಳು ಪೋಸ್ಟ್ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ಕೂಡ ಇಂತಹ ಅಭಿಯಾನ ನಡೆದಿತ್ತು. ಇದು ಪ್ರೀತಿ, ವಿಶ್ವಾಸಕ್ಕೆ ಅಭಿಮಾನಿಗಳ ಬೇಡಿಕೆ ಅಷ್ಟೇ. ಇದರಿಂದ ಸರ್ಕಾರಕ್ಕೆ ತೊಂದರೆ ಆಗಲ್ಲ. ಸರ್ಕಾರದ ಸುಗಮವಾಗಿ ನಡೆಯುತ್ತದೆ ಎಂದು ಭರವಸೆ ನೀಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv