ಬೆಂಗಳೂರು: ಮಾರ್ಚ್ ನಲ್ಲಿ ಯುಗಾದಿ ಹಬ್ಬದ ಸಂದರ್ಭದಲ್ಲೇ ನಮಗೆ ಮೀಸಲಾತಿ ಸಿಗುವ ವಿಶ್ವಾಸ ಇದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
Advertisement
ಬೆಂಗಳೂರಿನಲ್ಲಿ ಇಂದು ಹಿಂದುಳಿದ ವರ್ಗಗಳ ಆಯೋಗದ ವಿಚಾರಣೆಯಲ್ಲಿ ಹಾಜರಾಗಿ ಗೌಡ ಲಿಂಗಾಯತ ಸಮುದಾಯದ ಬಗ್ಗೆಯೂ ವಿವರಣೆ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ ಸಮಾಜ, ಗೌಡ, ಲಿಂಗಾಯತ ಸಮಾಜವನ್ನು 2ಎಗೆ ಸೇರ್ಪಡೆ ಮಾಡಬೇಕೆಂದು ಹೋರಾಟ ನಡೆಯುತ್ತಿದೆ. ಪಂಚಮಸಾಲಿಗಳೆಂದರೆ, ಉತ್ತರ ಕರ್ನಾಟಕ ಮಾತ್ರ ಅಲ್ಲ, ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಯಲ್ಲಿ ಗೌಡ ಲಿಂಗಾಯತ ಹೆಸರಿನಲ್ದಿದ್ದಾರೆ. ಅವರೆಲ್ಲ ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇಂದು ಹಿಂದುಳಿದ ವರ್ಗಗಳ ಆಯೋಗ ಗೌಡ ಲಿಂಗಾಯತದ ಬಗ್ಗೆ ವಿವರಣೆ ಕೇಳಲು ಕರೆದಿದ್ದರು. ನಾವು ನಮ್ಮ ವಕೀಲರ ಜೊತೆ ಬಂದು ಅಭಿಪ್ರಾಯ ತಿಳಿಸಿದ್ದೇವೆ ಎಂದರು. ಇದನ್ನೂ ಓದಿ: ಪಂಚಮಸಾಲಿ ಸ್ವಾಮೀಜಿಗೆ ಬಸವಣ್ಣನವರ ಹೆಸರು ಹೇಳೋ ನೈತಿಕತೆಯೇ ಇಲ್ಲ: ಪುಟ್ಟಸಿದ್ಧಶೆಟ್ಟಿ
Advertisement
Advertisement
ಗೌಡ, ಲಿಂಗಾಯತರು ನಮ್ಮ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿದ್ದವರು. ಅವರಿಗೆ 2ಎ ಮೀಸಲಾತಿ ನೀಡಬೇಕು ಎಂದು ಮನವಿ ಸಹ ಮಾಡಿದ್ದೇವೆ. ಈಗಾಗ್ಲೇ ಸರ್ಕಾರಕ್ಕೆ ನಮ್ಮ ಮನವಿಯನ್ನು ತಿಳಿಸಿದ್ದೇವೆ. ಹಿಂದೆ ನಮ್ಮ ಮನವಿ ಹೇಳಲು ಸಿಎಂ ಮನೆ ಬಾಗಿಲಿಗೆ ಹೋಗಬೇಕಿತ್ತು, ಈಗಿನ ಸಿಎಂ ಹುಬ್ಬಳ್ಳಿಯಲ್ಲಿ ನಮ್ಮ ಸಭೆಗೆ ಬಂದು ನಮ್ಮ ಮನವಿ ಆಲಿಸಿದ್ದಾರೆ. ಹಿಂದೆ ಯಡಿಯೂರಪ್ಪನರ ಕಿವಿಗೆ ಯಾರೋ ಏನೋ ತುಂಬಿದ್ದರು. ಹೀಗಾಗಿ ಯಡಿಯೂರಪ್ಪನವರು ನಮಗೆ ಅಷ್ಟಾಗಿ ಸ್ಪಂದಿಸಲಿಲ್ಲ. ಈಗ ಬೊಮ್ಮಾಯಿಯವರು ನಮ್ಮ ಮನವಿಗೆ ಸ್ಪಂದಿಸುತ್ತಿದ್ದರೆ, ಅದಷ್ಟು ಬೇಗ ನಮಗೆ ಸಿಹಿ ಸುದ್ದಿ ಸಿಗುವ ವಿಶ್ವಾಸವಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬೂಸ್ಟರ್ ಡೋಸ್ ಪಡೆಯಲು 60 ವರ್ಷ ಮೇಲ್ಪಟ್ಟವರಿಗೆ ಹೊಸ ಮಾರ್ಗಸೂಚಿ
Advertisement
ಬೊಮ್ಮಾಯಿ ಅವರು ಸಿಎಂ ಆಗಿ ಎಲ್ಲಿಯವರೆಗೆ ಇರ್ತಾರೆ ಅಲ್ಲಿಯವರೆಗೆ ನಮ್ಮ ಬೆಂಬಲವಿದೆ ಎಂದು ಜಯಮೃತ್ಯುಂಜಯ ಶ್ರೀಗಳು ಪ್ರತಿಕ್ರಿಯೆ ನೀಡಿದರು. 2023ರವರೆಗೆ ಅವರೇ ಮುಂದುವರೆಯುತ್ತಾರೆ. ಅಲ್ಲಿಯವರೆಗೂ ನಮ್ಮ ಬೆಂಬಲವಿದೆ. ಬದಲಾವಣೆ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಮಾತನಾಡುವುದು ಅಷ್ಟು ಸಮಂಜಸವಲ್ಲ ಎಂದು ಅಭಿಪ್ರಾಯಪಟ್ಟರು.
ಹಿಂದುಳಿದ ವರ್ಗಗಳ ಆಯೋಗದ ವಿಚಾರಣೆ ವೇಳೆ ಜಯಮೃತ್ಯುಂಜಯ ಶ್ರೀಗಳ ನಿಯೋಗದಲ್ಲಿ ಲಿಂಗಾಯತಗೌಡ ಮಹಾಸಭಾ ಅಧ್ಯಕ್ಷ ಆಲನಹಳ್ಳಿ ಪುಟ್ಟಸ್ವಾಮಿ, ರಾಜ್ಯ ಸಂಚಾಲಕ ಅಮ್ಮನಪುರ ಮಲ್ಲೇಶ್, ಮೈಸೂರು ಭಾಗದ ಮುಖಂಡರಾದ ದೂರ ಮಂಜುನಾಥ್ ಉಪಸ್ಥಿತರಿದ್ದರು.