BelgaumDistrictsKarnatakaLatestMain Post

ವಿ ಆರ್ ನಾಟ್ ಎ ಸೆಕೆಂಡ್ ಕ್ಲಾಸ್ ಸಿಟಿಜನ್ಸ್: ಎಂ.ಬಿ.ಪಾಟೀಲ್

ಬೆಳಗಾವಿ: ಇಬ್ಬರ ಕದನದಲ್ಲಿ ನಾನು ಯಾಕೆ ಬರಲಿ. ನಮಗೂ ಸಾಮರ್ಥ್ಯ ಇದೆ. ನಾವು ಬರಬೇಕು ಅಂದರೆ ನೇರವಾಗಿಯೇ ಬರುತ್ತೇವೆ. ವಿ ಆರ್ ನಾಟ್ ಎ ಸೆಕೆಂಡ್ ಕ್ಲಾಸ್ ಸಿಟಿಜನ್ಸ್ ಎಂದು ತಾನು ಸಿಎಂ ಹುದ್ದೆಗೆ ಸಮರ್ಥ ಅಭ್ಯರ್ಥಿ ಎಂದು ಪರೋಕ್ಷವಾಗಿ ಎಂ.ಬಿ.ಪಾಟೀಲ್ ಟಾಂಗ್ ನೀಡಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಎಂ.ಬಿ. ಪಾಟೀಲ್ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸಿದ್ದರಾಮಯ್ಯ, ಡಿಕೆಶಿ ಇಬ್ಬರ ಕದನದಲ್ಲಿ ಎಂ.ಬಿ.ಪಾಟೀಲ್‍ಗೆ ಚಾನ್ಸ್ ಬರಬಹುದಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಬ್ಬರ ಕದನ ನನಗೆ ಯಾಕಪ್ಪಾ? ನಮಗೂ ಸಾಮರ್ಥ್ಯ ಇದೆ. ಯಾವಾಗ ಬೇಕು. ಆವಾಗ ನೇರವಾಗಿಯೇ ಬರುತ್ತೇನೆ. ಎಂ.ಬಿ.ಪಾಟೀಲ್ ಇಬ್ಬರ ಕದನದಾಗ ಬರುವಂತದ್ದು ಬೇಕಾಗಿಲ್ಲ. ನಾವು ಬರಬೇಕು ಅಂದರೆ ನೇರವಾಗಿಯೇ ಬರುತ್ತೇವೆ. ವಿ ಆರ್ ನಾಟ್ ಎ ಸೆಕೆಂಡ್ ಕ್ಲಾಸ್ ಸಿಟಿಜನ್ಸ್ ಎಂದು ಹೇಳಿದ್ದಾರೆ.

ಸಿಎಂ ಅಭ್ಯರ್ಥಿ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿರುವ ಗೊಂದಲ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸರ್ವೇ ಸಾಮಾನ್ಯ ಪದ್ಧತಿ ಇದೆ. ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ನಿರ್ಣಯ ಮಾಡುತ್ತದೆ. ಕಾಂಗ್ರೆಸ್ ಪಕ್ಷ ಒಂದು ವೇಳೆ ಬಯಸಿದರೆ, ಪಂಜಾಬ್ ರೀತಿ ಯಾರನ್ನು ಪ್ರಾಜೆಕ್ಟ್ ಮಾಡಿದರೆ, ಅವರೂ ಅದನ್ನು ಡಿಕ್ಲೇರ್ ಮಾಡುತ್ತಾರೆ. ಹೈಕಮಾಂಡ್‍ಗೆ ಕೇಳುವ ಪ್ರಶ್ನೆಯನ್ನು ನನ್ನನ್ನು ಕೇಳಿದರೆ ಹೇಗೆ? ಹೈಕಮಾಂಡ್ ಆ ನಿರ್ಣಯ ತೆಗೆದುಕೊಳ್ಳಬಹುದು. ತಗೆದುಕೊಳ್ಳದೇ ಇರಬಹುದು ಎಂದಿದ್ದಾರೆ. ಇದನ್ನೂ ಓದಿ: 100 ದಿನ ಪೂರೈಸಿದ ‘ಕೆಜಿಎಫ್ 2’ ಸಿನಿಮಾ: ಯಶ್ ಹೊಸ ಸಿನಿಮಾ ಅನೌನ್ಸ್ ಆಗಲೇ ಇಲ್ಲ

ಉತ್ತರ ಕರ್ನಾಟಕದಲ್ಲಿ ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ ಮನಸ್ಸು ಮಾಡಿದರೆ, ಲಿಂಗಾಯತ ಸಿಎಂ ಆಗಬಹುದು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೂ ಕೂಡ ಮೂಕ ಪ್ರೇಕ್ಷಕರಲ್ಲ. ಒಕ್ಕಲಿಗ ಇರಬಹುದು, ಲಿಂಗಾಯತ ಸಮುದಾಯ ಇರಬಹುದು. ಮುಸಲ್ಮಾನರು ಏಕೆ ಸಿಎಂ ಆಗಬಾರದು, ದಲಿತರು ಏಕೆ ಆಗಬಾರದು ಎಂದು ಮರು ಪ್ರಶ್ನಿಸಿದರು. ಇದನ್ನೂ ಓದಿ: ಈಶ್ವರಪ್ಪಗೆ B-ರಿಪೋರ್ಟ್ ಹಾಕ್ತಾರೆ ಅಂತಾ ನನಗೆ ಗೊತ್ತಿತ್ತು: ಸಿದ್ದರಾಮಯ್ಯ

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿ ಕಾಂಗ್ರೆಸ್ ಭವನದಿಂದ ಡಿಸಿ ಕಚೇರಿವರೆಗೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಆರ್.ಬಿ ತಿಮ್ಮಾಪುರ, ಶಾಸಕಿ ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕ ಫಿರೋಜ್ ಸೇಠ್ ಸೇರಿದಂತೆ ಕೈನಾಯಕರು ಭಾಗಿಯಾಗಿದ್ದರು. ಈ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬೀಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.

Live Tv

Leave a Reply

Your email address will not be published.

Back to top button