ಮೈಸೂರು: ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ವಿ ಆರ್ ನಾಟ್ ಬೆಗ್ಗರ್ಸ್ ಎಂದು ಕಾಂಗ್ರೆಸ್‍ಗೆ ಟಾಂಗ್ ಕೊಟ್ಟಿದ್ದಾರೆ.
ಮೈಸೂರು ನಗರ ಪ್ರದಕ್ಷಿಣೆಗೆ ಸಿಎಂ ಕುಮಾರಸ್ವಾಮಿ ಆಗಮಿಸಿದ್ದಾರೆ. ಇದೇ ವೇಳೆ ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರದ ಬಗ್ಗೆ ಮಾತನಾಡಿದ ಸಿಎಂ, “ನಾವು ಬೆಗ್ಗರ್ಸ್ ಅಲ್ಲ. ನಮಗೆ ಏಳೋ ಐದೋ ಮೂರೋ ಸೀಟು ಬಿಟ್ಟು ಕೊಡ್ತಾರೋ ಗೊತ್ತಿಲ್ಲ. ವೀ ಆರ್ ನಾಟ್ ಬೆಗ್ಗರ್ಸ್. ರಾಷ್ಟ್ರಕ್ಕೆ ಒಂದು ಸಂದೇಶ ರವಾನೆ ಆಗಬೇಕಾದರೆ ಎಲ್ಲರೂ ಕೂತು ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಬೇಕು. ಆಡಳಿತ ಕಡೆಗೆ ನಾನು ಗಮನ ಹರಿಸಿದ್ದೇನೆ. ನಮ್ಮ ರಾಷ್ಟ್ರಧ್ಯಕ್ಷರು ಕಾಂಗ್ರೆಸ್ ಜೊತೆ ಕೂತು ಮಾತಾಡಿ ಸೀಟು ಹಂಚಿಕೆ ಮಾಡಿಕೊಳ್ತಾರೆ. ನಾನು ಈ ಸ್ಥಾನ ಹಂಚಿಕೆ ಬಗ್ಗೆ ಯೋಚನೆ ಮಾಡಿಲ್ಲ” ಎಂದು ಹೇಳಿದರು.
ಎರಡು ಪಾರಂಪರಿಕ ಕಟ್ಟಡ ನೆಲಸಮಕ್ಕೆ ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ಪಾಲಿಕೆಯ ಈ ಕ್ರಮಕ್ಕೆ ಯದುವಂಶದ ಯದುವೀರ್ ಒಡೆಯರ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಎಂ ಕುಮಾರಸ್ವಾಮಿ ಅವರು ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಕಟ್ಟಡವನ್ನು ವೀಕ್ಷಣೆ ಮಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv