ಬೆಂಗಳೂರು: ಜೆಡಿಎಸ್ (JDS) ಏಕಾಂಗಿಯಾಗಿಯಾದರೂ ಚುನಾವಣೆಗೆ ಸ್ಪರ್ಧಿಸಲಿ, ಬಿಜೆಪಿ (BJP) ಜೊತೆ ಮೈತ್ರಿಯಾದರೂ ಮಾಡಿಕೊಳ್ಳಲಿ. ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಪ್ರಾರಂಭವಾಗಿದೆ. ಅವರು ನಮ್ಮ ಮೈತ್ರಿ ಬಗ್ಗೆ ತಲೆ ಕೆಡಿಸಿಕೊಳ್ಳೋದು ಬೇಡ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (H.D.Kumaraswamy) ಅವರ ಹೇಳಿಕೆ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿದರು. ನಾವು ಅವರ ಸುದ್ದಿಗೆ ಹೋಗಿಲ್ಲ. ಈ ಹಿಂದೆ ಹಿರಿಯರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಏಕಾಂಗಿಯಾಗಿ ಹೋರಾಡುತ್ತೇವೆ ಎಂದಿದ್ದರು. ಹಾಗೆಂದಿದ್ದ ಅವರ ಮಾತು ಎಲ್ಲಿ ಹೋಯಿತು? ಜೆಡಿಎಸ್-ಬಿಜೆಪಿ ಮೈತ್ರಿಗೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಅವರ ರಾಜಕೀಯ ಅಸ್ತಿತ್ವಕ್ಕಾಗಿ ಅವರು ತೀರ್ಮಾನ ಮಾಡುತ್ತಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಅವರ ಸ್ಟ್ಯಾಂಡ್ ಏನೆಂದು ಅಧಿಕೃತವಾಗಿ ಹೇಳಲಿ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ-ಜೆಡಿಎಸ್ ಮೈತ್ರಿ: ಡಿ.ಕೆ.ಸುರೇಶ್
Advertisement
Advertisement
ಮೈತ್ರಿ (Alliance) ಬಗ್ಗೆ ಮೊದಲ ದಿನದಿಂದಲೂ ನಮಗೆ ಗೊತ್ತು. ಕುಮಾರಸ್ವಾಮಿ, ಹೆಚ್.ಡಿ.ದೇವೇಗೌಡರು (H.D.Deve Gowda) ಒಂದೊಂದು ದಿನ ಒಂದೊಂದು ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. 2018ರಲ್ಲಿ ಮೈತ್ರಿ ಮಾಡಿಕೊಳ್ಳುವಾಗ ರೊಟ್ಟಿ ಹಳಸಿರಲಿಲ್ಲವೇ? ಈಗ ಕಾಂಗ್ರೆಸ್ಸಿನವರು ಮಾತನಾಡುತ್ತಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅವರು ಮಾತನಾಡುತ್ತಲೇ ಇರಲಿ. ನಾನು ಕೇಳಿದ ಪ್ರಶ್ನೆಗಳಿಗೆ ಮೊದಲು ಅವರು ಉತ್ತರ ಹೇಳಲಿ ಎಂದರು. ಇದನ್ನೂ ಓದಿ: ಜೆಡಿಎಸ್ ಮುಖವಾಡ ಕಳಚಿತು.. ಬಿಜೆಪಿಯೊಂದಿಗೆ ಮೈತ್ರಿ ಸ್ವಾಗತಿಸುತ್ತೇನೆ: ಹೆಬ್ಬಾಳ್ಕರ್
Advertisement
Web Stories