ಬೆಂಗಳೂರು: ಪ್ರತ್ಯೇಕ ರಾಜ್ಯ ಬಯಸಿದವರು ನಾವಲ್ಲ. ಸಮಗ್ರ ಕರ್ನಾಟಕ ಬಯಸಿದವರು ನಾವು ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಉತ್ತರ ಕರ್ನಾಟಕ-ದಕ್ಷಿಣ ಕರ್ನಾಟಕ ರಾಜ್ಯದ ಎರಡು ಕಣ್ಣುಗಳು ಇದ್ದಂತೆ. ನಾವು ಅಭಿವೃದ್ಧಿಯನ್ನು ಬಯಸುತ್ತೇವೆ ಹೊರತು ಪ್ರತ್ಯೇಕ ರಾಜ್ಯ ಅಲ್ಲ. ಕಾಂಗ್ರೆಸ್ ಪಕ್ಷಕ್ಕೆ ದಕ್ಷಿಣ ಕರ್ನಾಟಕಕ್ಕಿಂತ ಹೆಚ್ಚಾಗಿ ಉತ್ತರ ಕರ್ನಾಟಕದ ಜನ ಮತ ನೀಡಿದ್ದಾರೆ ಅಂದ್ರು.
Advertisement
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವತ್ತೂ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ತಾರತಮ್ಯ ಮಾಡಿಲ್ಲ. ಕುಮಾರಸ್ವಾಮಿಯವರೂ ಮಾಡಲ್ಲ ಅನ್ನೋ ನಂಬಿಕೆ ಇದೆ ಎಂದು ಹೇಳಿದ್ದಾರೆ. ರಾಜ್ಯ ಇಬ್ಬಾಗ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಬಾರದು. ಈ ವಿಚಾರವನ್ನಿಟ್ಟುಕೊಂಡು ಬಿಎಸ್‍ವೈ ರಾಜ್ಯ ಪ್ರವಾಸ ನಡೆಸಿದ್ರೆ ಅದು ದುರ್ದೈವ ಎಂದು ಅಸಮಾಧಾನ ವ್ಯಕ್ತಪಡಿಸಿದರು.