ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ (Gruhalakshmi Scheme) ಯಾವುದೇ ಪರಿಷ್ಕರಣೆ ಮಾಡಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ, ಐದು ವರ್ಷ ಮಾತಿನಂತೆ ನಡೆಯುತ್ತೇವೆ. ಗೃಹಲಕ್ಷ್ಮಿ ನಗದು ಹಾಕುವುದು ಸಲ್ಪ ವಿಳಂಬವಾಗಿತ್ತು, ಇದೀಗ ಎಲ್ಲಾ ಸರಿಯಾಗಿದೆ. ಈಗ ಎರಡು ತಿಂಗಳ ಕಂತು ಬಿಡುಗಡೆಯಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮೊಯ್ಲಿ ಹೇಳಿಕೆಗೆ ಕಾಂಗ್ರೆಸ್ ಸಚಿವರ ರಕ್ಷಣಾತ್ಮಕ ಹೇಳಿಕೆ – ಹೈಕಮಾಂಡ್ ಕ್ರಮ ಕೈಗೊಳ್ಳುತ್ತೆ: ಎಂಬಿಪಿ, ಲಾಡ್
ಸಿ.ಟಿ.ರವಿ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ನಾನು ಇಂದು ಸದನಕ್ಕೆ ಬಂದಿದ್ದೇನೆ. ನಿಮಗೆ ಎಷ್ಟು ಮಾಹಿತಿ ಇದೆಯೋ ನನಗೂ ಅಷ್ಟೇ ಮಾಹಿತಿ ಇದೆ. ಎಥಿಕ್ಸ್ ಕಮಿಟಿಗೆ ಕೊಟ್ಟಿರೋ ವಿಚಾರದ ಬಗ್ಗೆ ಗೊತ್ತಿಲ್ಲ. ನಾನು ಆಸ್ಪತ್ರೆಯಲ್ಲಿ ಇದ್ದಾಗ ಹೊರಟ್ಟಿ ಅವರು ಆಸ್ಪತ್ರೆಗೆ ಬಂದಿದ್ದರು. ಇದರ ಬಗ್ಗೆ ಏನೂ ಮಾತನಾಡಿಲ್ಲ. ಯಾರಿಗೂ ಈ ರೀತಿ ಆಗಬಾರದು. ಇದರ ಬಗ್ಗೆ ಮುಂದೆ ಮಾತನಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಚಿತ್ರರಂಗ ಗೋಕಾಕ್ ಚಳವಳಿ ಮಾಡಿ ಸರ್ಕಾರವನ್ನೇ ಬೀಳಿಸಿತ್ತು: ಸಾರಾ ಗೋವಿಂದು ಎಚ್ಚರಿಕೆ