ಬಳ್ಳಾರಿ: ಯಡಿಯೂರಪ್ಪ ಮತ್ತು ನನ್ನ ನಡುವೆ ವೈರತ್ವ ಇಲ್ಲ. ಯಡಿಯೂರಪ್ಪ ಮತ್ತು ನಾನು ಹಿಂದೂಸ್ತಾನ- ಪಾಕಿಸ್ತಾನ ಏನಲ್ಲ, ನಾವೆಲ್ಲಾ ಒಗ್ಗಟ್ಟಾಗಿದ್ದೇವೆ ಎಂದು ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮದ ಅಂಗವಾಗಿ ಬಳ್ಳಾರಿಗೆ ಆಗಮಿಸಿದ್ದ ಈಶ್ವರಪ್ಪ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಮೈಸೂರಿನಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಯಡಿಯೂರಪ್ಪ ಮತ್ತು ನಾನು ಭಾಗಿಯಾಗಿದ್ದೇವೆ. ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಜಯ ಸಾಧಿಸಬೇಕೆಂಬ ಗುರಿ ನಮ್ಮದಾಗಿದೆ. ಇದರಲ್ಲಿ ಭಿನ್ನಾಭಿಪ್ರಾವಿಲ್ಲ ಎಂದು ತಿಳಿಸಿದರು.
ಇದೇ ವೇಳೆ ರಾಯಣ್ಣ ಬ್ರಿಗೇಡ್ ಬಗ್ಗೆ ಕೇಳಿದ ಪ್ರಶ್ನೆಗೆ, ರಾಯಣ್ಣ ಬ್ರಿಗೇಡ್ ಅದ್ರಷ್ಟಕ್ಕೆ ಅದು ನಡೆಯುತ್ತದೆ ಎಂದು ಹೇಳಿದರು.
ಇನ್ನು ಬಳ್ಳಾರಿ ಪಾಲಿಕೆಯ ಚುನಾವಣೆಯಲ್ಲಿ ಸಂಸದ ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿರುವ ಕುರಿತು ಮಾತನಾಡಿದ ಈಶ್ವರಪ್ಪ, ಅವರು ಯಾವ ಕಾರಣಕ್ಕೆ ಕಾಂಗ್ರೆಸ್‍ಗೆ ಮತ ನೀಡಿದರು ಎಂಬುವುದು ಗೊತ್ತಿಲ್ಲ. ಯಾವ ರಾಜಕಾರಣಕ್ಕಾಗಿ ಮತ ನೀಡಿದ್ದಾರೆಂಬುದು ತಿಳಿದಿಲ್ಲ. ಮೈಸೂರಿನ ಕಾರ್ಯಕಾರಿಣಿ ಸಭೆಗೆ ಅವರು ಬಂದಿದ್ದರೆ ಕೇಳುತ್ತಿದ್ದೆ, ಆದರೆ ಕಾರಣಾಂತರಗಳಿಂದ ಬಂದಿರಲಿಲ್ಲ. ಆ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಅಭ್ಯರ್ಥಿ ಇರಲಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಅನ್ನೋ ಬಿಜೆಪಿ ಸಂಸದರಿಂದ ಕೈಗೆ ಮತ!