ವಾಷಿಂಗ್ಟನ್: ರಷ್ಯಾ-ಉಕ್ರೇನ್ ಯುದ್ಧದ (Russia Ukraine War) ವಿಚಾರದಲ್ಲಿ ನಾವು ತಟಸ್ಥವಾಗಿಲ್ಲ. ನಾವು ಶಾಂತಿಯ ಕಡೆ ನಿಲ್ಲುತ್ತೇವೆ ಎಂದು ಪ್ರಧಾನಿ ನರೇಂದ್ರ (Narendra Modi) ಮೋದಿ ಹೇಳಿದ್ದಾರೆ.
ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅಮೆರಿಕ (America) ಪ್ರವಾಸ ಕೈಗೊಂಡಿದ್ದಾರೆ. ವಿಶೇಷ ವಿಮಾನದ ಮೂಲಕ ಅವರು ನ್ಯೂಯಾರ್ಕ್ ತಲುಪಿದ್ದಾರೆ. ಇದಕ್ಕೂ ಮುನ್ನ ಅಮೆರಿಕದ ವಾಲ್‌ಸ್ಟ್ರೀಟ್ ಜರ್ನಲ್ ಪತ್ರಿಕೆಗೆ ಸಂದರ್ಶನ ನೀಡಿದ ಮೋದಿ, ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ನಾವು ತಟಸ್ಥವಾಗಿಲ್ಲ. ನಾವು ಶಾಂತಿಯ ಕಡೆ ನಿಲ್ಲುತ್ತೇವೆ. ಯುದ್ಧ ನಿಲ್ಲಿಸಲು ಭಾರತ ಮಾಡಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡಿದೆ ಎಂದಿದ್ದಾರೆ.
Advertisement
Advertisement
ಭಾರತ-ಚೀನಾ ಸಂಬಂಧದ ಬಗ್ಗೆ ಪ್ರಸ್ತಾಪಿಸುತ್ತಾ, ಯಾವುದೇ ದೇಶಗಳ ನಡುವೆ ದ್ವಿಪಕ್ಷೀಯ ಬಾಂಧವ್ಯ ಇರಬೇಕು ಎಂದರೆ ಗಡಿಯಲ್ಲಿ ಶಾಂತಿಯುತ ವಾತಾವರಣ ಇರುವುದು ಮುಖ್ಯ. ಭಾರತ-ಅಮೆರಿಕ ಬಂಧ ಹಿಂದೆಂದಿಗಿಂತಲೂ ಬಲವಾಗಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. ಸ್ವಾತಂತ್ರ್ಯ ಭಾರತದಲ್ಲಿ ಹುಟ್ಟಿದ ಮೊದಲ ಪ್ರಧಾನಿ ನಾನು. ಅದಕ್ಕೆ ನನ್ನ ಆಲೋಚನೆಗಳು ದೇಶದ ಇತಿಹಾಸ, ಸಂಪ್ರದಾಯಗಳಿಂದ ಪ್ರೇರಣೆ ಹೊಂದಿವೆ ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಟ್ರಕ್‌ಗಳಲ್ಲಿ ಹವಾನಿಯಂತ್ರಿತ ಡ್ರೈವರ್ ಕ್ಯಾಬಿನ್‌ಗಳು ಕಡ್ಡಾಯ: ನಿತಿನ್ ಗಡ್ಕರಿ
Advertisement
ಈ ನಡುವೆ ಚೀನಾ ಎಂದಿನಂತೆ ಕ್ಯಾತೆ ತೆಗೆದಿದೆ. ನಮ್ಮ ಬೆಳವಣಿಗೆ ತಡೆಯಲು ಭಾರತಕ್ಕೆ ಪ್ರಚೋದನೆ ನೀಡುವ ಕೆಲಸವನ್ನು ಅಮೆರಿಕ ಮಾಡುತ್ತಿದೆ. ಆದರೆ ಇದು ಫಲಿಸಲ್ಲ. ಜಾಗತಿಕ ರಫ್ತಿನಲ್ಲಿ ನಮ್ಮ ಸ್ಥಾನವನ್ನು ಭರ್ತಿ ಮಾಡಲು ಭಾರತ ಸೇರಿ ಯಾವ ದೇಶಕ್ಕೂ ಸಾಧ್ಯ ಆಗಲ್ಲ. ಅಮೆರಿಕ ಭೌಗೋಳಿಕ ರಾಜಕೀಯ ಲೆಕ್ಕದಲ್ಲಿ ಎಡವುತ್ತಿದೆ ಎಂದು ಚೀನಾ ಹೇಳಿಕೊಂಡಿದೆ.
Advertisement
ಬುಧವಾರ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವವನ್ನು ಪ್ರಧಾನಿ ಮೋದಿಯವರೇ ವಹಿಸಲಿದ್ದಾರೆ. ಬಳಿಕ ವಾಷಿಂಗ್ಟನ್ ಡಿಸಿಗೆ ಪ್ರಯಾಣಿಸಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ದಂಪತಿ ಆಯೋಜಿಸಿರುವ ಔತಣ ಕೂಟದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಬಾಂಬೆ ಐಐಟಿಗೆ 315 ಕೋಟಿ ರೂ. ದೇಣಿಗೆ ನೀಡಿದ ಇನ್ಫೋಸಿಸ್ ಸಹ ಸಂಸ್ಥಾಪಕ