ನವದೆಹಲಿ: ಅಳಿಯ ರಿಷಿ ಸುನಕ್ ಬಗ್ಗೆ ಹೆಮ್ಮೆಯಾಗುತ್ತಿದೆ ಎಂದು ಹೇಳುವ ಮೂಲಕ ಇನ್ಫೋಸೀಸ್ ಸಹ-ಸಂಸ್ಥಾಪಕ ನಾರಾಯಣಮೂರ್ತಿ (Narayana Murthy) ಶುಭ ಕೋರಿದ್ದಾರೆ.
42 ವರ್ಷದ ರಿಷಿ ಸುನಕ್ (Rishi Sunak) ಅವರು ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ನಾರಾಯಣ ಮೂರ್ತಿಯವರು, ಮೊದಲು ರಿಷಿಗೆ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ. ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ. ಅಲ್ಲದೆ ಅವರಿಗೆ ಯಶಸ್ಸನ್ನು ಬಯಸುತ್ತೇವೆ ಎಂದು ಹೇಳಿದರು. ಬ್ರಿಟನ್ ಜನರಿಗೆ ರಿಷಿ ತಮ್ಮ ಕೈಲಾದಷ್ಟು ಒಳ್ಳೆಯದು ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಮೂರ್ತಿಯವರು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವ ನಾಯಕರ ಪಟ್ಟಿಯಲ್ಲಿ ಭಾರತೀಯರ ಪಾರುಪತ್ಯ – ರಿಷಿ ಸುನಾಕ್ ನೂತನ ಎಂಟ್ರಿ
ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಬೋರಿಸ್ ಜಾನ್ಸನ್ ಭಾನುವಾರ ಘೋಷಿಸಿದ್ದರಿಂದ ರಿಷಿ ಸುನಾಕ್ ಬ್ರಿಟನ್ (Britain) ನ ಮುಂದಿನ ಪ್ರಧಾನಿಯಾಗುವುದು ಬಹುತೇಕ ಖಚಿತವಾಗಿತ್ತು. ಈಗ ಸುನಾಕ್‍ಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಪ್ರತಿಸ್ಪರ್ಧಿ ಮೊರ್ಡಂಟ್ ಸ್ಪರ್ಧೆಯಿಂದ ಹಿಂದೆ ಸರಿಯಬೇಕು ಎಂದು ಪಕ್ಷದ ಸದಸ್ಯರಿಂದ ಒತ್ತಡ ಕೇಳಿಬಂದಿತ್ತು. ಯುಕೆಯ ಮೊದಲ ಬಿಳಿಯರಲ್ಲದ, ಭಾರತೀಯ ಮೂಲದವರೊಬ್ಬರು ಪ್ರಧಾನಿಯಾದರೆಂಬ ಇತಿಹಾಸ ಕೂಡ ಸೃಷ್ಟಿಯಾಗಿದೆ. ಇದನ್ನೂ ಓದಿ: ಬ್ರಿಟನ್ ನೂತನ ಪ್ರಧಾನಿ ಭಾರತ ಮೂಲದ ರಿಷಿ ಸುನಾಕ್ ಬಗ್ಗೆ ನೀವು ತಿಳಿಯಲೇಬೇಕಾದ ಸಂಗತಿಗಳಿವು
ರಿಷಿ ಸುನಾಕ್ ಅವರು ಇನ್ಫೋಸಿಸ್ ಸಂಸ್ಥಾಪಕರಾದ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ಅವರ ಅಳಿಯ. ಬ್ರಿಟನ್‍ನಲ್ಲಿ ಪ್ರಬಲ ಯುವ ರಾಜಕಾರಣಿಯಾಗಿ ಬೆಳೆದಿರುವ ಅವರು ಹಣಕಾಸು ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.