ಬೆಂಗಳೂರು: ಎರಡು ಪಕ್ಷಗಳು ಸುಪ್ರೀಂ ಕೋರ್ಟ್ ಗೆ ಹೋದರೆ ಹೋಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರಿಗೆ ಈ ಹಕ್ಕು ಇರಬಹುದು. ಆದರೆ, ಸರ್ಕಾರವನ್ನು ರಚನೆ ಮಾಡವವರು ನಾವೇ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡೆ ಅವರ ಶಾಸಕರಲ್ಲಿ ಅಸಮಾಧಾನ ಹುಟ್ಟಿಸಿದೆ. ಹೀಗಾಗಿ, ಅವರು ಶಾಸಕಾಂಗ ಸಭೆಗೆ ಹಾಜರಾಗಿಲ್ಲ. ಇದರಿಂದಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಡಿಸ್ಟರ್ಬ್ ಆಗಿದ್ದಾರೆ. ಇದನ್ನ ಅರಿಯದೇ ಬಿಜೆಪಿಯನ್ನು ದೂರುವುದು ಸರಿಯಲ್ಲ ಎಂದರು.
Advertisement
ನಾವು ಹೆಚ್ಚು ಕ್ಷೇತ್ರದಲ್ಲಿ ಜಯ ಗಳಿಸಿದ್ದೇವೆ. ಸರ್ಕಾರ ರಚನೆ ನಮ್ಮ ಸಂವಿಧಾನಾತ್ಮಕ ಹಕ್ಕು. ನಮ್ಮ ಮನವಿಯನ್ನು ರಾಜ್ಯಪಾಲರು ಮಾನ್ಯ ಮಾಡುತ್ತಾರೆ ಎನ್ನುವ ವಿಶ್ವಾಸ ನಮಗಿದೆ. ಶಾಸಕರ ಕುದುರೆ ವ್ಯಾಪಾರ ಸಂಸ್ಕೃತಿಯನ್ನು ಬಿಜೆಪಿ ಮಾಡುವುದಿಲ್ಲ. ಈಗಾಗಲೇ ಕಾಂಗ್ರೆಸ್ ಶಾಸಕರಲ್ಲಿಯೇ ಒಡಕು ಉಂಟಾಗಿದೆ ಇದನ್ನ ಅವರು ಅರಿಯಲಿ ಎಂದು ಜಾಡವೇಕರ್ ತಿರುಗೇಟು ನೀಡಿದರು.