ಗುವಾಹಟಿ: ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟರ್ ನೀಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ (Assam CM Himath Biswa) ಘೋಷಿಸಿದ್ದಾರೆ.
ಜುಲೈ 5 ರಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳಲ್ಲಿ 60% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಹುಡುಗಿಯರು ಮತ್ತು 75% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಹುಡುಗರು ಈ ಉಚಿತ ಸ್ಕೂಟರ್ (Free Scooter) ಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದಿದ್ದಾರೆ.
Advertisement
Advertisement
ಈ ಸಂಬಂಧ ಅಸ್ಸಾಂ ಪ್ರವಾಸೋದ್ಯಮ ಸಚಿವ ಜಯಂತ್ ಮಲ್ಲಾ ಬರೂಹ್ ಪ್ರತಿಕ್ರಿಯಿಸಿ, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಉತ್ತೇಜಿಸಲು ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತ್ತಮ ಪ್ರವೇಶ ಒದಗಿಸುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸಂತ್ರಸ್ತನ ಕಾಲು ತೊಳೆದು ಗೌರವಿಸಿದ ಮಧ್ಯಪ್ರದೇಶ ಸಿಎಂ
Advertisement
Advertisement
ಸರ್ಕಾರಿ ಮತ್ತು ಪ್ರಾಂತೀಯ ಶಾಲೆಗಳಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ 3.78 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೆ 167 ಕೋಟಿ ರೂ. ಮೀಸಲಿಡಲಾಗಿದೆ. ಇದಲ್ಲದೇ ಸೆಪ್ಟೆಂಬರ್ನಿಂದ ತಿಂಗಳಿಗೆ 1,250 ರೂ.ನಂತೆ 7 ಲಕ್ಷ ಜನರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಅಸ್ಸಾಂನಲ್ಲಿ ರಾಷ್ಟ್ರೀಯ ಕ್ರೀಡಾಕೂಟ ಆಯೋಜಿಸಲು ಕ್ರಮಕೈಗೊಳ್ಳುವಂತೆ ಭಾರತೀಯ ಒಲಿಂಪಿಕ್ಸ್ ಸಂಸ್ಥೆಗೆ ಮನವಿ ಮಾಡಲಾಗಿದೆ. ಅಸ್ಸಾಂ ರಾಜ್ಯದ ಕೃಷಿ ವಿಶ್ವವಿದ್ಯಾಲಯದಲ್ಲಿ 27% ಸೀಟುಗಳನ್ನು ಒಬಿಸಿಗೆ ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಇದೇ ವೇಳೆ ಸಿಎಂ ಹೇಳಿದ್ದಾರೆ
Web Stories