ಬೆಳಗಾವಿ: ರೈತರಿಗೆ ಹಾಗೂ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಅಧಿವೇಶನದಲ್ಲಿ ಒತ್ತಡ ಹೇರಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ್‍ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸೋಮವಾರದಿಂದ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಪಕ್ಷದಿಂದ ನಿರ್ಣಯ ಕೈಗೊಳ್ಳಲಾಗಿದೆ. ಪ್ರಮುಖವಾಗಿ ರೈತರಿಗೆ ಪರಿಹಾರ, ನೆರೆ ಸಂತ್ರಸ್ತರಿಗೆ ಪರಿಹಾರ, ಮೈಸೂರು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಸೇರಿ ಇನ್ನಿತರ ವಿಷಯಗಳ ಕುರಿತು ಚರ್ಚಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್ ವೋಟಿಗೋಸ್ಕರ ಧರ್ಮವನ್ನ ಉಪಯೋಗಿಸ್ತಾರೆ: ಬಿ.ಸಿ ನಾಗೇಶ್
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸದನದಲ್ಲಿ ಚರ್ಚಿಸದೇ ಮಸೂದೆ ಜಾರಿಗೊಳಿಸಿವೆ. ಇದು ಸರಿಯಾದ ಕ್ರಮವಲ್ಲ, ಈ ಬಗ್ಗೆ ಸಮಗ್ರವಾಗಿ ಚರ್ಚೆಯಾಗಬೇಕು. ಒಂದು ವೇಳೆ ಇದರಲ್ಲಿ ನ್ಯೂನತೆಗಳಿದ್ದರೆ ಸರಿಪಡಿಸಬೇಕು. ಈ ಬಗ್ಗೆಯೂ ಕೂಡ ಸದನದಲ್ಲಿ ಧ್ವನಿ ಎತ್ತುತ್ತೇವೆ ಎಂದರು. ಇದನ್ನೂ ಓದಿ: ಬಡವರ ಆಹಾರ ಇಂದಿನ ದಿನಗಳಲ್ಲಿ ಶ್ರೀಮಂತರ ಆಹಾರವಾಗಿದೆ: ಬಿ.ಸಿ.ಪಾಟೀಲ್