ಜೈಪುರ: ನನ್ನ ಪತಿಯನ್ನು ಕೊಂದವರನ್ನು ಗಲ್ಲಿಗೇರಿಸಿ ಎಂದು ದುಷ್ಕರ್ಮಿಗಳಿಂದ ಹತ್ಯೆಯಾದ ಉದಯಪುರ ಟೈಲರ್ ಕನ್ಹಯ್ಯಲಾಲ್ ಪತ್ನಿ ಜಶೋದಾ ಒತ್ತಾಯಿಸಿದ್ದಾರೆ.
ಕನ್ಹಯ್ಯಲಾಲ್ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಟೈಲರ್ ಪತ್ನಿ, ಹಂತಕರಿಗೆ ಮರಣದಂಡನೆ ವಿಧಿಸಿ, ನಮಗೆ ನ್ಯಾಯ ಒದಗಿಸಿ ಎಂದು ಮನವಿ ಮಾಡಿ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಉದಯ್‌ಪುರ ಬರ್ಬರ ಹತ್ಯೆ ಎನ್‌ಐಎ ಹೆಗಲಿಗೆ – ಪಾತಕಿಗಳಿಗೆ ಐಸಿಸ್ ಲಿಂಕ್?
Advertisement
Advertisement
ನನ್ನ ಪತಿಗೆ ಕೊಲೆ ಬೆದರಿಕೆ ಕರೆ ಬಂದ ನಂತರ ಕೆಲವು ದಿನ ಅವರು ಕೆಲಸಕ್ಕೆ ಹೋಗಿರಲಿಲ್ಲ. ಮತ್ತೆ ಕೆಲಸಕ್ಕೆ ಹೋಗಬೇಕು ಎಂದು ನಿರ್ಧರಿಸಿ ನಿನ್ನೆ ಹೋಗಿದ್ದರು. ಈ ವೇಳೆ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಜಶೋದಾ ನೋವು ತೋಡಿಕೊಂಡಿದ್ದಾರೆ.
Advertisement
ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಈ ಘಟನೆಯಿಂದ ರಾಜಸ್ಥಾನದ ಜತೆಗೆ ದೇಶದ ವಿವಿಧೆಡೆ ಪ್ರತಿಭಟನೆ ಆರಂಭವಾಗಿದೆ. ಇದನ್ನೂ ಓದಿ: ಉದಯಪುರದ ಹತ್ಯೆ ಖಂಡನೀಯ: ಇದು ದೇಶದ ಕಾನೂನು, ಇಸ್ಲಾಂ ಧರ್ಮಕ್ಕೆ ವಿರುದ್ಧವಾದದ್ದು – ಮುಸ್ಲಿಂ ಮಂಡಳಿ
Advertisement
ಆರೋಪಿ ರಿಯಾಜ್, ಕನ್ನಯ್ಯಲಾಲ್ ಅವರ ಕತ್ತನ್ನು ಕತ್ತರಿಸಿದ್ದು, ಮತ್ತೊಬ್ಬ ಆರೋಪಿ ಈ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಈ ಕೊಲೆಯನ್ನು ತಾವೇ ಮಾಡಿದ್ದಾಗಿ ಹೇಳಿರುವ ವಿಡಿಯೊಯೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಇಬ್ಬರನ್ನೂ ಬಂಧಿಸಲಾಗಿದೆ. ಈ ಭೀಕರ ಘಟನೆಯ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಉದಯಪುರದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.