ನವದೆಹಲಿ: ಬಾಲಕೋಟ್‍ನಲ್ಲಿ ನಡೆದ ವಾಯುದಾಳಿಯಲ್ಲಿ ಹೆಚ್ಚಿನ ಪ್ರಮಾಣದ ಹಾನಿಯಾಗಿಲ್ಲ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಎಸ್.ಎಸ್ ಅಹ್ಲುವಾಲಿಯಾ ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
ಕೇಂದ್ರ ಸರ್ಕಾರ ವಾಯುದಾಳಿಯಲ್ಲಿ ಯಾವುದೇ ಸಾವನ್ನು ಬಯಸಲಿಲ್ಲ. ವಿಮಾನಗಳ ಮೂಲಕ ಬಾಂಬ್ ದಾಳಿ ನಡೆಸಿ ಉಗ್ರರ ನೆಲಗಳನ್ನು ಧ್ವಂಸ ಮಾಡಲು ನಾವು ಸಮರ್ಥರಿದ್ದಾರೆ ಎಂದು ತೋರಿಸಿಕೊಡಲು ಏರ್ ಸ್ಟ್ರೈಕ್ ಮಾಡಿದ್ದೇವೆ ಎಂದು ಹೇಳಿದ್ದಾಗಿ ಮಾಧ್ಯಮವೊಂದು ವರದಿ ಮಾಡಿದೆ.
Advertisement
Advertisement
ನಮ್ಮ ಶಕ್ತಿ, ಸಾಮರ್ಥ್ಯದ ಪ್ರದರ್ಶನಕ್ಕೆ ಈ ದಾಳಿ ಮಾಡಲಾಗಿದೆ. ನಾನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾಧ್ಯಮವನ್ನು ನೋಡಿದ್ದೇನೆ. ಏರ್ ಸ್ಟ್ರೈಕ್ ನಡೆದ ಬಳಿಕ ನರೇಂದ್ರ ಮೋದಿ ಅವರು ರಾಜಸ್ಥಾನದ ಚುರುವಿನಲ್ಲಿ ಮಾಡಿದ ಭಾಷಣವನ್ನು ಕೇಳಿದ್ದೇನೆ. ಈ ವೇಳೆ 300 ಮಂದಿ ಹತ್ಯೆಯಾಗಿದ್ದಾರೆ ಎಂದು ಹೇಳಿದ್ದಾರಾ? ಯಾರಾದರೂ ವಕ್ತಾರರು ಹೇಳಿದ್ದಾರಾ? ಅಮಿತ್ ಶಾ ಹೇಳಿದ್ದಾರಾ ಎಂದು ಅಹ್ಲುವಾಲಿಯಾ ಪ್ರಶ್ನಿಸಿದರು.
Advertisement
ಈ ಹಿಂದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಂಗಳವಾರದಂದು ಭಾರತೀಯ ವಾಯುಪಡೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ ಮಾಹಿತಿ ತಿಳಿಸಿಲ್ಲ. ಏರ್ ಸ್ಟ್ರೈಕ್ ಬಗ್ಗೆ ನಾವು ಮಾಧ್ಯಮಗಳನ್ನು ನೋಡಿ ಮಾಹಿತಿ ಪಡೆದಿದ್ದೇವೆ. ಯಾವ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ. ಎಷ್ಟು ಬಾಂಬ್‍ಗಳನ್ನು ಉಗ್ರರ ಮೇಲೆ ಹಾಕಲಾಗಿದೆ. ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಕೇಂದ್ರ ಸರ್ಕಾರ ನಮಗೆ ನೀಡಬೇಕು ಎಂದು ಆಗ್ರಹಿಸಿದ್ದರು.
Advertisement
ಜೈಷ್ ಉಗ್ರರ ನೆಲೆಯಾದ ಬಾಲಕೋಟ್ ನಲ್ಲಿ ನಡೆದ ವಾಯು ದಾಳಿಯಲ್ಲಿ 300ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು ಎಂದು ವರದಿಯಾಗಿತ್ತು.