ಬೆಂಗಳೂರು: ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ನಿರ್ಧಾರಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ.
Advertisement
ಈ ಕುರಿತಂತೆ ಪಬ್ಲಿಕ್ ಟಿ.ವಿ ಜೊತೆಗೆ ಮಾತನಾಡಿದ ಅವರು, ಮೈಸೂರು ಮಹಾರಾಜರ ಮತ್ತು ಕರ್ನಾಟಕದ ಇತಿಹಾಸದ ಕುರಿತಂತೆ ಒಂದಷ್ಟು ಮಾಹಿತಿಗಳನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದೆ. ಎಲ್ಲಾ ಪೋಷಕರು ನಮ್ಮ ಮಕ್ಕಳು ಜ್ಞಾನ ಸಂಪಾದನೆ ಮಾಡುತ್ತಿದ್ದಾರೆ. ಜ್ಞಾನಶೀಲರಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಹಿಂದೆ ಹಳ್ಳಿಗಳಲ್ಲಿ ರಾಮಾಯಣ, ಮಹಾಭಾರತ ನಾಟಕಗಳು ನಡೆಯುತ್ತಿದ್ದೇವು. ಹಾಗಾಗಿ ಎಲ್ಲರಲ್ಲಿಯೂ ಸಂಸ್ಕಾರ ಬೆಳೆಯುತ್ತಿತ್ತು. ಆದರೀಗ ಇದರ ಕೊರತೆ ಇದೆ ಎಂದಿದ್ದಾರೆ. ಇದನ್ನೂ ಓದಿ: ಗುಜರಾತ್ ಶಾಲಾ, ಕಾಲೇಜ್‍ಗಳಲ್ಲಿ ಭಗವದ್ಗೀತೆ ಕಡ್ಡಾಯ
Advertisement
Advertisement
ಇದೇ ವೇಳೆ ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ. ಗುಜರಾತ್ ಸರ್ಕಾರದ ನಿರ್ಧಾರ ಉತ್ತಮವಾಗಿ ಇದೆ. ಮಕ್ಕಳಿಗೆ ಮಾರಲ್ ಸೈನ್ಸ್ ವಿಷಯಗಳು ಇವತ್ತು ಬೋಧನೆ ಆಗುತ್ತಿಲ್ಲ. ಹೀಗಾಗಿ ಭಗವದ್ಗೀತೆ ಅಂಶಗಳನ್ನು ತಿಳಿಸುವುದು ಬಹಳ ಮುಖ್ಯ. ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಬಗ್ಗೆ ಸಿಎಂ, ಶಿಕ್ಷಣ ತಜ್ಞರು, ಸಲಹಾ ಸಮಿತಿಗಳ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Advertisement
To include Indian culture & knowledge system in school education from academic year 2022-23, in first phase, values & principles contained in Bhagavad Gita being introduced in schools from Std 6-12 as per understanding & interest of children: Gujarat Education Min Jitu Vaghani pic.twitter.com/Xt0Jl5Akl4
— ANI (@ANI) March 17, 2022
ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ- ಕಾಲೇಜುಗಳಲ್ಲಿ ಭಗವದ್ಗೀತೆ ಕಡ್ಡಾಯ ಮಾಡಲು ಗುಜರಾತ್ ಸರ್ಕಾರ ಮುಂದಾಗಿದ್ದು, ಆರನೇ ತರಗತಿಯಿಂದ 12ನೇ ತರಗತಿವರೆಗೂ ಹಿಂದೂ ಧರ್ಮಗ್ರಂಥ ಭಗವದ್ಗೀತೆಯನ್ನು ಬೋಧಿಸುವುದು, ಪಠಣ ಮಾಡಲಾಗುತ್ತದೆ. ಭಗವದ್ಗೀತೆ ಎನ್ನುವುದು ಕೇವಲ ಗ್ರಂಥವಲ್ಲ. ಅದೊಂದು ಜೀವನ ವಿಧಾನ. ನಮ್ಮ ಸಂಸ್ಕೃತಿಯ ಪ್ರತೀಕ. ಇದು ಎಲ್ಲರಿಗೂ ಗೊತ್ತಾಗುವುದು ಅತ್ಯಗತ್ಯ ಎಂದು ಗುಜರಾತ್ ಶಿಕ್ಷಣ ಸಚಿವ ಜಿತು ವಘಾನಿ ಹೇಳಿದ್ದರು. ಇದನ್ನೂ ಓದಿ: ಡಾ.ಪುನೀತ್ ರಾಜ್‍ಕುಮಾರ್ ನೆನೆದು ಗುಣಗಾನ ಮಾಡಿದ ಪ್ರಿಯಾಂಕ್ ಖರ್ಗೆ