ನಮಗೆ ರಾಜಕೀಯದಲ್ಲಿ ದ್ವೇಷ ಗೊತ್ತಿಲ್ಲ: ಸಿದ್ದರಾಮಯ್ಯ

Public TV
1 Min Read
SIDDARAMAIAH 2

ಮೈಸೂರು: ನಮಗೆ ರಾಜಕೀಯದಲ್ಲಿ ದ್ವೇಷ ಗೊತ್ತಿಲ್ಲ. ನಾವು ಯಾರಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪುವುದಿಲ್ಲ. ಹಾಗಂತ ನಾವು ದ್ವೇಷದ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮುಯ್ಯ (Siddaramaiah) ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳೆ ಕುಮಾರಸ್ವಾಮಿ (HD Kumaraswamy) ಮನೆ ದೇವರು. ಕುಮಾರಸ್ವಾಮಿ ಹೊಟ್ಟೆಕಿಚ್ಚಿನಿಂದ ದ್ವೇಷದಿಂದ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಹೇಳುವುದೆಲ್ಲ ಸುಳ್ಳು. ಕುಮಾರಸ್ವಾಮಿ ಇವತ್ತಿನವರೆಗೆ ಯಾವುದಾದರೂ ಸತ್ಯ ಹೇಳಿದ್ರೆ ತೋರಿಸಿ. ಒಂದೇ ಒಂದು ವಿಚಾರದಲ್ಲಿ ಸತ್ಯ ಹೇಳಿದ್ದಾರಾ ಹೇಳಿ. ಕುಮಾರಸ್ವಾಮಿ ಬರೀ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ನಮ್ಮ ಮಗನ ವಿಚಾರದಲ್ಲಿ ನಿನ್ನೆ ಸುಮ್ಮನೆ ಸುಳ್ಳು ಹಬ್ಬಿಸಿದ್ರು. ನನ್ನ ಮಗ ನನಗಾಗಿ ಕ್ಷೇತ್ರ ಬಿಟ್ಟು ಕೊಟ್ಟಿದ್ದಾನೆ. ಈಗ ನನ್ನ ಪರವಾಗಿ ಕ್ಷೇತ್ರದಲ್ಲಿ ಜನರ ಕೆಲಸ ಮಾಡುತ್ತಿದ್ದಾನೆ. ಜನರ ಕೆಲಸ ಮಾಡುವುದು ತಪ್ಪಾ. ಕೆಡಿಪಿ ಸದಸ್ಯನಾಗಿರುವ ಕಾರಣ ಕೆಲವು ವಿಚಾರಗಳ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾನೆ. ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಿದ್ರೆ ಹೇಗೆ ಹೇಳಿ ಎಂದು ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು.

Share This Article