ಕೋಲಾರ: ಪಠ್ಯಪುಸ್ತಕ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಬಗ್ಗೆ ಶಿಕ್ಷಣ ಸಚಿವರಿಂದ ಸಿಎಂ ವರದಿ ಕೇಳಿದ್ದಾರೆ. ವರದಿ ಬಂದ ಬಳಿಕ ಅವರೇ ಉತ್ತರ ನೀಡಲಿದ್ದಾರೆ ಎಂದು ಸಚಿವ ಮುನಿರತ್ನ ಹೇಳಿದರು.
ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಠ್ಯಪುಸ್ತಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ವರದಿ ಕೇಳಿದ್ದಾರೆ. ವರದಿ ಬಂದ ಬಳಿಕ ನಾನೂ ಮಾತನಾಡುವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪುಷ್ಪ ಸಿನಿಮಾ ಮಾದರಿಯಲ್ಲಿ ರಕ್ತಚಂದನ ಸಾಗಾಟ- ಶ್ವಾನದೊಂದಿಗೆ ರೋಚಕ ಆಪರೇಷನ್
Advertisement
Advertisement
ಇದೆ ವೇಳೆ ಡಿಸಿಸಿ ಬ್ಯಾಂಕ್ ವಿಚಾರವಾಗಿ ಮಾತನಾಡಿದ ಅವರು, ಕೋಲಾರದ ಡಿಸಿಸಿ ಬ್ಯಾಂಕ್‌ನಲ್ಲಿ ಭಾರೀ ಭ್ರಷ್ಟಾಚಾರ ಆಗಿದೆ. ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ಸಿಎಂ ಅವರಿಗೆ ಮನವಿ ಮಾಡಿದ್ದೇನೆ. ಕೆಲವರು ಅವರ ಸ್ವಂತ ಆಸ್ತಿಯಂತೆ ಬ್ಯಾಂಕ್ ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಹಾಗೂ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ದಯವಿಟ್ಟು ನನ್ನ ಹೆಂಡತಿಯನ್ನು ನನಗೆ ಕೊಡಿ- ಕಣ್ಣೀರು ಹಾಕಿದ ವರ
Advertisement
Advertisement
ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಶಾಂತಿ ಕದಡುತ್ತಿದ್ದಾರೆ. ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬರಲಿದೆ. 5 ವರ್ಷ ಅಪೂರ್ಣವಾಗಿ ಅಧಿಕಾರ ಪೂರೈಸಿ ಸಿಎಂ ಅವರ ಸಮ್ಮುಖದಲ್ಲಿ ಚುನಾವಣೆಗೆ ತೆರಳುತ್ತೇವೆ. ಅವಧಿ ಪೂರ್ಣ ಚುನಾವಣೆ ಬಂದ್ರೂ ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದು ಹೇಳಿದರು.