ನವದೆಹಲಿ: ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಸರ್ಕಾರವು ಜನರಿಂದ ದೇಣಿಗೆ ಇಟ್ಟಿದ್ದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ನಮ್ಮ ಪಕ್ಷವು ಹಣದ ಕೊರತೆಯನ್ನು ಎದುರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಎಂದು ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಬಿಜೆಪಿಯನ್ನು ಗುರಿಯಾಗಿಸಿಕೊಂಡ ಖರ್ಗೆ ಮಾತನಾಡಿ, ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ಜನರು ಒಟ್ಟಾಗಿ ಗಟ್ಟಿಯಾಗಿ ನಿಲ್ಲಬೇಕು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಗೆಲುವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: Lok Sabha Election – ಬೊಮ್ಮಾಯಿಗೆ ಅಮಿತ್ ಶಾ ಕರೆ
Advertisement
Advertisement
ಚುನಾವಣೆಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು. ಬಿಜೆಪಿಯು ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಆದಾಯ ತೆರಿಗೆ ಮೂಲಕ ಪಕ್ಷಕ್ಕೆ ಭಾರಿ ದಂಡವನ್ನು ವಿಧಿಸುತ್ತಿದೆ. ಆದರೆ ಅವರು ಸಾವಿರಾರು ಕೋಟಿ ರೂಪಾಯಿಗಳನ್ನು ಬಹಿರಂಗಪಡಿಸಲು ಸಿದ್ಧರಿಲ್ಲ. ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಹೊರತಾಗಿಯೂ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ಬಹಿರಂಗಪಡಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.
Advertisement
Advertisement
ಜನರು ದೇಣಿಗೆಯಾಗಿ ನೀಡಿದ್ದು ನಮ್ಮ ಪಕ್ಷಕ್ಕೆ ಸೇರಿದ ಹಣ. ಆದರೆ ಬಿಜೆಪಿಯವರು ಅದನ್ನು ಸ್ಥಗಿತಗೊಳಿಸಿದ್ದಾರೆ. ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ. ಆದರೆ, ಅವರು (ಬಿಜೆಪಿ) ಪಡೆದಿರುವ ಚುನಾವಣಾ ಬಾಂಡ್‌ಗಳ ಬಗ್ಗೆ ಬಹಿರಂಗಪಡಿಸುತ್ತಿಲ್ಲ. ಏಕೆಂದರೆ ಅವರ ಕಳ್ಳತನ ಹೊರಗೆ ಬರಬಹುದು. ಅವರ ತಪ್ಪು ಕೆಲಸಗಳು ಹೊರಬರಬಹುದು. ಆದ್ದರಿಂದ ಅವರು ಜುಲೈವರೆಗೆ ಸಮಯ ಕೇಳಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನಂತೆ ಸ್ವಾಗತಿಸಿದ್ದೀರಿ, ಆ ಋಣವನ್ನು ತೀರಿಸಲು ಅವಕಾಶ ಕೊಡಿ: ಯದುವೀರ್ ಒಡೆಯರ್