ಬೆಂಗಳೂರು: ಬಿಜೆಪಿ ಶಾಸಕರ ಅಮಾನತು (BJP MLA’s Suspension) ಹಿಂಪಡೆಯುವ ಬಗ್ಗೆ ನಿರ್ಧಾರ ಮಾಡಿದ್ದೇವೆ ಎಂದು ಸ್ಪೀಕರ್ ಯುಟಿ ಖಾದರ್ (UT Khader) ತಿಳಿಸಿದ್ದಾರೆ.
ಬಿಜೆಪಿ ಅಮಾನತ್ತಾದ ಶಾಸಕರ ಬಗ್ಗೆ ಸಂಜೆ ಸಭೆ ಹಿನ್ನೆಲೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನ ನಡೆಯುವ ಸಂಧರ್ಭದಲ್ಲಿ ಸಂವಿಧಾನ ಪೀಠಕ್ಕೆ ಅಗೌರವ ತೋರಿಸಿದ್ದರು. ಅದರ ಬಗ್ಗೆ ಕ್ರಮ ತೆಗೆದುಕೊಂಡಿದ್ದೆವು. ಈ ಮಧ್ಯೆ ಅಮಾನತು ಆದೇಶ ವಾಪಸ್ ಪಡೆಯುವಂತೆ ವಿಪಕ್ಷ ನಾಯಕರು, ನಾಯಕರ ಬೇಡಿಕೆ ಇತ್ತು. ಚರ್ಚೆ ಸಂಧರ್ಭದಲ್ಲಿ ಘಟನೆ ನಡೆದಿದೆ ಎಂದಿದ್ದರು. ಇದರ ಬಗ್ಗೆ ಇಂದು ಚರ್ಚೆ ಇದೆ. ಚರ್ಚೆ ಬಳಿಕ ನಿರ್ಧಾರ ಆಗಲಿದೆ ಎಂದರು. ಇದನ್ನೂ ಓದಿ: ಟೆಸ್ಟ್ ನಿವೃತ್ತಿ ಬಳಿಕ ಟೆಂಪಲ್ ರನ್; ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ವಿರುಷ್ಕಾ ದಂಪತಿ ಭೇಟಿ
ಸಿಎಂ, ವಿಪಕ್ಷ ನಾಯಕ ಎಲ್ಲರೂ ಸಭೆಯಲ್ಲಿ ಇರುತ್ತಾರೆ. ಅಂದು ಆದ ಘಟನೆಯನ್ನ ವಿಧಾನಸಭೆಯಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡಲಾಯಿತು. ಬಹುಮತ ಇರುವ ಶಾಸಕರ ನಿರ್ಣಯದ ಮೇಲೆ ತೆಗೆದುಕೊಂಡ ಕ್ರಮ ಅದು. ಅಮಾನತು ಮಾಡಿ ಎರಡು ತಿಂಗಳಾಗಿದೆ. ಹೆಚ್ಚು ಕಡಿಮೆ ಆದೇಶ ವಾಪಸ್ ಆಗಲಿದೆ. ಶಾಸಕ ಮಿತ್ರರು ನಮ್ಮವರೇ, ಸಕರಾತ್ಮಕ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಟ ಮಡೆನೂರು ಮನು ರೇಪ್ ಕೇಸ್ – 31 ತಿಂಗಳ ವಾಟ್ಸಾಪ್ ಚಾಟ್ ಪಡೆದಿರೋ ಪೊಲೀಸರು
ವಿಧಾನಸೌಧ ಗೈಡೆಡ್ ಟೂರ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗೈಡೆಡ್ ಟೂರ್ ಮೂಲಕ ವಿಧಾನಸೌಧದ ಪರಂಪರೆ, ಭವ್ಯತೆ, ಇತಿಹಾಸ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಉದ್ದೇಶವಿದೆ. ವಿಧಾನಸೌಧ ನಮ್ಮದು ಎಂಬ ಭಾವನೆ ಜನರಿಗೆ ಬರಬೇಕು. ಗೈಡೆಡ್ ಟೂರ್ ಬಗ್ಗೆ ಸಿಎಂ ಜೊತೆ ಚರ್ಚಿಸಿ ಆರಂಭಿಸಲಾಗಿದೆ. ಈ ಪ್ರವಾಸದ ಹೊಣೆ ಪ್ರವಾಸೋದ್ಯಮ ಇಲಾಖೆಗೆ ವಹಿಸಲಾಗಿದೆ. ಗೈಡೆಡ್ ಟೂರ್ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಉಳಿದಂತೆ ಪ್ರತಿಯೊಬ್ಬರಿಗೂ ತಲಾ 50 ರೂ. ನಿಗದಿಪಡಿಸಲಾಗಿದೆ. ಯಾಕೆ 50 ರೂ. ಅಂತ ಕೆಲವರು ಕೇಳುತ್ತಾರೆ. ಯಾರ ಬಳಿ ಫೋನ್ ಇರಲ್ವೋ ಅವರಿಂದ 50 ರೂ. ಪಡೆಯಲ್ಲ ಎಂದು ತಮಾಷೆ ಮಾಡಿದರು. ಇದನ್ನೂ ಓದಿ: ಸಕಲೇಶಪುರ | ಭಾರೀ ಗಾಳಿ ಮಳೆಗೆ ಹೋಟೆಲ್ ಗೋಡೆ ಕುಸಿತ – ನಾಲ್ವರಿಗೆ ಗಾಯ