ನಮ್ಮ ಮಸೀದಿಯನ್ನ ಕಳೆದುಕೊಂಡಿದ್ದೇವೆ.. ನಿಮ್ಮ ಹೃದಯದಲ್ಲಿ ನೋವಿಲ್ಲವೇ: ಬಾಬ್ರಿ ಮಸೀದಿ ಬಗ್ಗೆ ಮುಸ್ಲಿಂ ಯುವಕರಿಗೆ ಓವೈಸಿ ಪ್ರಶ್ನೆ

Public TV
2 Min Read
asaduddin owaisi

ಹೈದರಾಬಾದ್‌: ನಾವು ನಮ್ಮ ಮಸೀದಿಯನ್ನು (ಬಾಬ್ರಿ ಮಸೀದಿ) ಕಳೆದುಕೊಂಡಿದ್ದೇವೆ. ಅಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುತ್ತಿದ್ದೀರಿ. ನಿಮ್ಮ ಹೃದಯದಲ್ಲಿ ನೋವು ಇಲ್ಲವೇ ಎಂದು ಮುಸ್ಲಿಂ ಸಮುದಾಯದ ಯುವಕರನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ಪ್ರಶ್ನಿಸಿದ್ದಾರೆ.

ಅಯೋಧ್ಯೆ ರಾಮಮಂದಿರದ ಉದ್ಘಾಟನೆ ಸಮೀಪಿಸುತ್ತಿರುವಂತೆಯೇ ಬಿಜೆಪಿ ನೇತೃತ್ವದ ಕೇಂದ್ರದ ಚಟುವಟಿಕೆಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಅಸಾದುದ್ದೀನ್ ಓವೈಸಿ, ಮುಸ್ಲಿಂ ಸಮುದಾಯದ ಯುವಕರಿಗೆ ಮನವಿ ಮಾಡಿದ್ದಾರೆ. ದೇಶದಲ್ಲಿ ಜನವಸತಿ ಉಳಿಯಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಾಲರಾಮನ ಮೂರ್ತಿಯ ವಿಶೇಷ ಏನು? ಆಯ್ಕೆಗೆ ಮಾನದಂಡ ಏನು? ಶಿಲಾ ವಿಶೇಷತೆ ಏನು?

ayodhya ram mandir

ಬಾಬರಿ ಮಸೀದಿಯನ್ನು ಉಲ್ಲೇಖಿಸಿ ಮಾತನಾಡಿದ ಓವೈಸಿ, ಕಳೆದ 500 ವರ್ಷಗಳಿಂದ ಪವಿತ್ರ ಕುರಾನ್ ಪಠಣ ಮಾಡಿದ ಸ್ಥಳ ಈಗ ನಮ್ಮ ಕೈಯಲ್ಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯುವಕರೇ, ನಾನು ನಿಮಗೆ ಹೇಳುತ್ತಿದ್ದೇನೆ. ನಾವು ನಮ್ಮ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಈಗ ಅಲ್ಲಿ ಏನು ಮಾಡಲಾಗುತ್ತಿದೆ ಎಂಬುದನ್ನು ನೀವು ನೋಡುತ್ತಿದ್ದೀರಿ. ನಿಮ್ಮ ಹೃದಯದಲ್ಲಿ ನೋವು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: Ayodhya Ram Mandir – ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಪ್ರತಿಮೆ ಆಯ್ಕೆ?

babri masjid

500 ವರ್ಷಗಳ ಕಾಲ ನಾವು ಕುಳಿತು ಕುರಾನ್ ಪಠಿಸಿದ ಸ್ಥಳ ಇಂದು ನಮ್ಮ ಕೈಯಲ್ಲಿಲ್ಲ. ಯುವಕರೇ, ಇನ್ನು ಮೂರ್ನಾಲ್ಕು ಮಸೀದಿಗಳ ಬಗ್ಗೆ ಷಡ್ಯಂತ್ರ ನಡೆಯುತ್ತಿದೆ. ಅದರಲ್ಲಿ ದೆಹಲಿಯ ಸುನ್ಹೇರಿ ಮಸೀದಿ (ಗೋಲ್ಡನ್ ಮಸೀದಿ) ಸಹ ಸೇರಿದೆ ಎಂದು ನೀವು ನೋಡುತ್ತಿಲ್ಲವೇ? ವರ್ಷಗಳ ಕಠಿಣ ಪರಿಶ್ರಮದ ನಂತರ ನಾವು ಇಂದು ನಮ್ಮ ಸ್ಥಾನವನ್ನು ಸಾಧಿಸಿದ್ದೇವೆ. ನೀವು ಈ ವಿಷಯಗಳತ್ತ ಗಮನ ಹರಿಸಬೇಕು ಎಂದು ಎಚ್ಚರಿಸಿದ್ದಾರೆ.

ಯುವ ಮುಸ್ಲಿಮರು ಜಾಗರೂಕರಾಗಿರಬೇಕು ಮತ್ತು ಒಗ್ಗಟ್ಟಾಗಿರಬೇಕು. ನಿಮ್ಮ ಬೆಂಬಲ ಮತ್ತು ಶಕ್ತಿಯನ್ನು ಕಾಪಾಡಿಕೊಳ್ಳಿ. ಈ ಮಸೀದಿಗಳನ್ನು ನಮ್ಮಿಂದ ಕಸಿದುಕೊಳ್ಳುವ ಸಾಧ್ಯತೆಯಿದೆ. ನಾಳೆ ಮುದುಕರಾಗುವ ಇಂದಿನ ಯುವಕರು ತನಗೆ, ತನ್ನ ಕುಟುಂಬಕ್ಕೆ, ತನ್ನ ನಗರಕ್ಕೆ ಮತ್ತು ತನ್ನ ನೆರೆಹೊರೆಯರಿಗೆ ಹೇಗೆ ಸಹಾಯ ಮಾಡಬಹುದೆಂದು ಯೋಚಿಸುತ್ತಾನೆ ಎಂದು ನಾನು ಭಾವಿಸುತ್ತೇನೆ. ಏಕತೆ ಒಂದು ಶಕ್ತಿ, ಏಕತೆ ಒಂದು ಆಶೀರ್ವಾದ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಶ್ರೀರಾಮನ ಭಕ್ತರಿಗೆ ಮಾತ್ರ ಅಯೋಧ್ಯೆಗೆ ಆಹ್ವಾನ: ಉದ್ಧವ್ ಠಾಕ್ರೆಗೆ ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು

Share This Article