ಶಿವಮೊಗ್ಗ: ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರಿಗೆ ಹಣ ಕೊಡಲು ನಮ್ಮ ಅಭ್ಯಂತರ ಇಲ್ಲ. 10 ಸಾವಿರ ಕೋಟಿ ಕೊಡುತ್ತೇನೆ ಎಂದು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ತಿಳಿಸಿದರು.
ಶಿವಮೊಗ್ಗದಲ್ಲಿ (Shivamogga) ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಲ್ಪಸಂಖ್ಯಾತರ ಪರ ಹೇಳಿಕೆ ಹಿಂದೂಗಳ ಆಕ್ರೋಶಕ್ಕೆ ಅವಕಾಶ ಆಗುತ್ತದೆ. ಈ ರೀತಿಯ ಮಾತುಗಳನ್ನು ಮುಖ್ಯಮಂತ್ರಿ ಅವರಿಂದ ನಿರೀಕ್ಷೆ ಮಾಡಿರಲಿಲ್ಲ. ಈಗಾಗಲೇ ಅವರ ಹೇಳಿಕೆಯನ್ನು ಮಠಾಧಿಪತಿಗಳು ಸೇರಿದಂತೆ ಎಲ್ಲರೂ ಖಂಡಿಸಿದ್ದಾರೆ. ಏನಾದರೂ ಮಾತನಾಡಬೇಕಾದರೆ ಎಚ್ಚರಿಕೆ ವಹಿಸಿ ಮಾತನಾಡಬೇಕು ಎಂಬುದು ನನ್ನ ಸಲಹೆ ಎಂದರು. ಇದನ್ನೂ ಓದಿ: ನಾನು ಮಾಡಿದ ತೀರ್ಮಾನ ನನ್ನ ಮುಖದ ಮೇಲೆ ನಾನೇ ಉಗುಳಿಕೊಂಡಂತಾಗಿದೆ: ಸೋಮಣ್ಣ
Advertisement
Advertisement
ಲೋಕಸಭೆ ಚುನಾವಣೆಯಲ್ಲಿ (Lok Sabha Election) ಮೋದಿ ಹೆಸರಿನಲ್ಲಿ ನೂರಕ್ಕೆ ನೂರು ಗೆಲ್ಲುವುದರಲ್ಲಿ ಯಾವುದೇ ಅನುಮಾನ ಬೇಡ. ಓಲೈಕೆ ರಾಜಕಾರಣದಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದರೆ ಅದು ಸಾಧ್ಯವಿಲ್ಲ. ಬಿಜೆಪಿ (BJP) ಪರವಾದ, ಮೋದಿ ಪರವಾದ ವಾತಾವರಣದಿಂದ ನಾವು ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಲ್ಲು ಪ್ರಯತ್ನಿಸುತ್ತಿದ್ದೇವೆ. ಇದರಲ್ಲಿ ನೂರಕ್ಕೆ ನೂರರಷ್ಟು ಯಶಸ್ವಿಯಾಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಲಾಪಕ್ಕೆ ಬಾರದ ಸಚಿವ ಜಮೀರ್ – ಪರಿಷತ್‌ನಲ್ಲಿ ಗದ್ದಲ
Advertisement
ಭ್ರೂಣ ಹತ್ಯೆ (Foeticide) ಪ್ರಕರಣ ಜಾಸ್ತಿ ಆಗುತ್ತಿದೆ. ಬಹಳ ಜನ ಇದರಲ್ಲಿ ಭಾಗಿಯಾಗಿದ್ದಾರೆ. ಇದು ಅಕ್ಷಮ್ಯ ಅಪರಾಧ. ಇದು ನಿಲ್ಲಬೇಕು. ಈ ಬಗ್ಗೆ ಏನೇನು ಕಾನೂನು ಕ್ರಮ ಕೈಗೊಳ್ಳಬಹುದೋ ಆ ರೀತಿ ಕ್ರಮ ಕೈಗೊಳ್ಳಬೇಕು ಎಂದರು. ಇನ್ನು ಮಾಜಿ ಸಚಿವ ವಿ.ಸೋಮಣ್ಣ (V Somanna) ಅವರು ಯಾವುದೇ ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಅವರು ನಮ್ಮ ಜೊತೆಯಲ್ಲೇ ಇರುತ್ತಾರೆ. ನಾನು ಅವರ ಜೊತೆ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ನನಗಾದ ನೋವು ಹೇಳಿದ್ದೇನೆ, RSS ಬಗ್ಗೆ ಗೌರವವಿದೆ: ಗೂಳಿಹಟ್ಟಿ ಶೇಖರ್ ಸ್ಪಷ್ಟನೆ
Advertisement
ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿರುವ ಬಗ್ಗೆ ಈಗಾಗಲೇ ನಮ್ಮ ಮುಖಂಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರ ಕೇಂದ್ರದ ಕಡೆ ಬೆರಳು ಮಾಡಿ ತೋರಿಸದೇ, ರಾಜ್ಯ ಸರ್ಕಾರದಿಂದ ಯಾವ ಯಾವ ರೀತಿ ಪರಿಹಾರ ಕೊಡಬಹುದೋ ಅದನ್ನು ಮೊದಲು ಕೊಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ರೈತರಿಗೆ ಮಧ್ಯಂತರ ಬರ ಪರಿಹಾರವಾಗಿ 2,000 ರೂ. ಪರಿಹಾರ ನೀಡಲಾಗಿದೆ: ಕೃಷ್ಣಭೈರೇಗೌಡ